TOP STORIES:

ಅನಂತಾಡಿಯಲ್ಲಿ ಕುದ್ರೋಳಿ ಗುರು ಬೆಳದಿಂಗಳು ಸಂಘಟನೆಯಿಂದ ‘ಗುರುವನ’ ಲೋಕಾರ್ಪಣೆ


ಬದುಕಿನಲ್ಲಿ ಕನಸು ಕಾಣುವುದು ಸುಲಭ ಆದರೆ ಅದನ್ನು ನನಸು ಮಾಡುವುದು ಬಲುಕಷ್ಟತ್ಯಾಗ, ಪರಿಶ್ರಮ, ಇಚ್ಚಾಶಕ್ತಿ ಇರುವತಂಡವೊಂದಿದ್ದರೆ ಯಾವುದನ್ನು ಸಾಧಿಸಲು ಸಾಧ್ಯ ಎಂದು ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಸಚಿವರಾದ ಕೋಟಶ್ರೀನಿವಾಸ ಪೂಜಾರಿರವರು ಹೇಳಿದರು.

ಅವರು   ಗುರು ಬೆಳದಿಂಗಳು ರಿ. ಕುದ್ರೋಳಿ ಇದರ ವತಿಯಿಂದ ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ, ಶ್ರೀಬ್ರಹ್ಮಬೈದರ್ಕಳ ಗರಡಿಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ೧೬೭ನೇ ಜನ್ಮದಿನಾಚರಣೆಯ ಪ್ರಯುಕ್ತ ೧೬೭ ಔಷದೀಯ ಸಸಿನೆಡುವ ಕಾರ್ಯಕ್ರಮ ಹಾಗೂ ನೂತನವಾಗಿ ನಿರ್ಮಿಸಿರುವ  ಗುರುವವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಬದುಕಿನ ಜೊತೆಗೆ ಪರಿಸರವನ್ನು ಉಳಿಸಿಬೆಳೆಸುವ ಕೆಲಸ ಎಲ್ಲರಿಂದ ಆಗಬೇಕಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿಸಮಾಜದಲ್ಲಿರುವ ಕಟ್ಟಕಡೇಯ ವ್ಯಕ್ತಿಗೂ ಸಹಕಾರ ಮಾಡಬೇಕೆನ್ನುವುದು ಆಶಯ ನನ್ನದಾಗಿದೆ. ಗುರುಬೆಳದಿಂಗಳು ಸಂಸ್ಥೆಯಯೋಜನೆ ಯೋಚನೆಗಳು ಹಲವಿದ್ದು ಅವೆಲ್ಲವೂ ಸಫಲವಾಗಲಿ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ  ಮಾಜಿ ಸಚಿವರಾದ ರಮಾನಾಥ ರೈರವರು ಮಾತನಾಡಿ ಗುರುಗಳು ನಡೆದು ಬಂದ ಹಾದಿಅವಿಸ್ಮರಣೀಯ. ಈಗಿನ ಪೀಳಿಗೆ ಹಿಂದಿನ ಪೀಳಿಗೆಯನ್ನು ಅರ್ಥಮಾಡಿಕೊಂಡು ಮುನ್ನಡೆಯ ಬೇಕಾದುದು ಅಗತ್ಯ. ಗುರುಬೆಳದಿಂಗಳು ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಾ ಬರುತ್ತಿದೆ. ದೈವಗಳ ಸಾನಿಧ್ಯವಿರುವ ಬಾಕಿಲದ ಮಣ್ಣಿನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಔಷದೀಯ ವನವನ್ನು ನಿರ್ಮಿಸಿರುವುದು ಒಂದು ಒಳ್ಳೆಯಬೆಳವಣಿಗೆಯಾಗಿದೆ ಎಂದರು.

ಗುರುಬೆಳದಿಂಗಳು ರಿ.ಕುದ್ರೋಳಿ ಇದರ ಅಧ್ಯಕ್ಷರಾದ ಪದ್ಮರಾಜ್ ಆರ್. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನುಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಜಿಲ್ಲೆಯ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಬ್ರಹ್ಮ ಶ್ರೀನಾರಾಯಣಗುರುಗಳ ೧೬೭ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ಬಾಕಿಲಗುತ್ತಿವಿನಲ್ಲಿ ೧೬೭ಔಷದೀಯಗಿಡಗಳನ್ನು‌ ನೆಟ್ಟು ಇದೀಗ  ಗುರುವನವನ್ನು ಲೋಕಾರ್ಪಣೆ ಗೊಳಿಸಲಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಸಿದ್ದಂತವನ್ನುನಾವೆಲ್ಲರೂ ಸಾಧಿಸುತ್ತೇವೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸಹಾಯ, ನಿರ್ಗತಿಕರಿಗೆ ಆಸರೆ, ಅನಾರೋಗ್ಯದಿಂದಿರುವ ಬಡವರನ್ನುಚಿಕಿತ್ಸೆಗೆ ಸಹಕಾರ ನೀಡುತ್ತಾ ಬಂದಿದ್ದೇವೆ. ಇನ್ನು ಮುಂದಿನ ದಿನಗಳಲ್ಲಿ ಹಲವಾರು ಸಮಾಜ ಮುಖಿ‌ಕಾರ್ಯವನ್ನು ನಡೆಸುವ ಇರಾದೆಇದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ  ಬಂದರು ಹಾಗೂ ಮೀನುಗಾರಿಕ ಸಚಿವರಾದ ಅಂಗಾರ ಎಸ್., ಬಂಟ್ವಾಳ ಶಾಸಕರಾದ ರಾಜೇಶ್ನಾಯ್ಕ್,ರವರು ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಅನಂತಾಡಿ ಬಾಕಿಲಗುತ್ತು ಶ್ರೀ ಉಳ್ಳಾಲ್ತಿ ವೈದ್ಯನಾಥೇಶ್ವರ ಕ್ಷೇತ್ರದ ಆಡಳಿತ ಅಧ್ಯಕ್ಷ ವಸಂತಪೂಜಾರಿ, ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜಯಾನಾಂದ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ರಾಜಾರಾಮ್ಕೆ.ಬಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು‌.

ಇಂತಹ ಕಾರ್ಯಕ್ರಮ ರಾಜ್ಯದ್ಯಂತ ನಡೆಯಬೇಕು:

ಎಸ್. ಅಂಗಾರ

ಕಾರ್ಯಕ್ರಮಕ್ಕೆ ಆಗಮಿಸಿದ ಬಂದರು ಹಾಗೂ ಮೀನುಗಾರಿಕ ಸಚಿವರಾದ ಎಸ್ ಅಂಗಾರರವರು ಪತ್ರಕರ್ತರೊಂದಿಗೆ ಮಾತನಾಡಿ

ಗಿಡಮೂಲಿಕೆಗಳ ಸಸಿಗಳನ್ನು ನೆಟ್ಟು ಬ್ರಹ್ಮ ಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಾಕಿಲದಲ್ಲಿ ಔಷದೀಯ ವನವನ್ನುನಿರ್ಮಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂದಿನ ದಿನಗಳಲ್ಲಿ ಅಳಿವಿನಂಚಿನಲ್ಲಿರುವ ಗಿಡಮೂಲಿಕೆ ಗಿಡಗಳನ್ನು ನೆಟ್ಟುಬೆಳೆಸುವುದು ಅಗತ್ಯವಾಗಿದೆ. ಇಂತಹ ಮಹತ್ಕಾರ್ಯಗಳಿಗೆ ಸರಕಾರದ ಭಾಗದಿಂದ ಸಹಕಾರವನ್ನು ನೀಡಲು ಶ್ರಮಿಸುತ್ತೇನೆ. ಇಂತಹಕಾರ್ಯಕ್ರಮಗಳು ನಮ್ಮ ಜಿಲ್ಲೆಗೆ ಮಾತ್ರ ಸೀಮಿತವಾಗದೆ  ರಾಜ್ಯಾದ್ಯಾಂತ ಔಷದೀಯ ಸಸಿಗಳನ್ನು ನೆಟ್ಟು ಬೆಳೆಸುವಕಾರ್ಯವಾಗಬೇಕು ಎಂದರು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »