TOP STORIES:

ಆರೋಗ್ಯಕರ ತೂಕ ಇಳಿಕೆಗಾಗಿ ನಿಮ್ಮ ಬ್ರೇಕ್ ಫಾಸ್ಟ್ ಹೀಗಿರಲಿ


 

Credits: Zee News

ತೂಕ ನಷ್ಟಕ್ಕೆ ಆಹಾರ: ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಬಹುತೇಕ ಜನರ ಸಾಮಾನ್ಯ ಸಮಸ್ಯೆ ಎಂದರೆ ತೂಕ ಹೆಚ್ಚಳ. ಆದರೆ, ಎಷ್ಟೇ ಕಟ್ಟುನಿಟ್ಟಾದ ಜೀವನ ಶೈಲಿಯನ್ನು ರೂಢಿಸಿಕೊಂಡರೂ ತೂಕ ಇಳಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಇದರಲ್ಲಿ ನಮ್ಮ ದೈನಂದಿನ ಆಹಾರ ಕ್ರಮವೂ ಬಹಳ ಪ್ರಮುಖ ಪಾತ್ರ ವಹಿಸುತ್ತದೆ.

ನಿಮ್ಮ ಹೆಚ್ಚುತ್ತಿರುವ ತೂಕವನ್ನು ಕಡಿಮೆ ಮಾಡಲು ನೀವು ಬಯಸಿದರೆ, ಅದನ್ನು ಬೆಳಗಿನ ಉಪಾಹಾರದಿಂದ ಪ್ರಾರಂಭಿಸಿ. ಬೆಳಗಿನ ಉಪಹಾರದಲ್ಲಿ ಆರೋಗ್ಯಕರ ಆಹಾರ ಸೇವಿಸಿದರೆ ಅದು ಆರೋಗ್ಯಕ್ಕೆ ಪ್ರಯೋಜನಕಾರಿ ಜೊತೆಗೆ ತೂಕ ಇಳಿಸುವಲ್ಲಿಯೂ ಸಹಕಾರಿ ಎಂದು ಸಾಬೀತುಪಡಿಸಬಹುದು.

ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಯಾವುದೇ ಕಾರಣಕ್ಕೂ ಉಪಹಾರವನ್ನು ಎಂದಿಗೂ ಬಿಡಬಾರದು. ಏಕೆಂದರೆ ಅದು ನೀಡುವ ಶಕ್ತಿ, ಅದರ ಪರಿಣಾಮವು ದಿನವಿಡೀ ಇರುತ್ತದೆ. ಅಲ್ಲದೆ, ಬೆಳಗಿನ ಉಪಾಹಾರದಲ್ಲಿ ಆರೋಗ್ಯಕರ ಆಹಾರವನ್ನು ಸೇವಿಸುವುದನ್ನು ರೂಢಿಸಿಕೊಳ್ಳಬೇಕು. ಅವುಗಳಲ್ಲಿ ಓಟ್ಸ್ ಕೂಡ ಒಂದು.

ಬೆಳಗಿನ ಉಪಾಹಾರದಲ್ಲಿ ಓಟ್ಸ್ ತಿನ್ನುವ ಪ್ರಯೋಜನಗಳು:

ಪೌಷ್ಟಿಕಾಂಶ ತಜ್ಞರ ಪ್ರಕಾರ, ಬೆಳಗಿನ ಉಪಾಹಾರದಲ್ಲಿ ಓಟ್ಸ್ ತಿನ್ನುವುದು ತುಂಬಾ ಆರೋಗ್ಯಕರ ಆಯ್ಕೆಯಾಗಿದೆ. ಈ ಆಹಾರದಲ್ಲಿ ವಿಟಮಿನ್ ಇ, ಕೊಬ್ಬಿನಾಮ್ಲಗಳು ಮತ್ತು ಫೈಬರ್ನಂತಹ ಪ್ರಮುಖ ಪೋಷಕಾಂಶಗಳು ಕಂಡುಬರುತ್ತವೆ, ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಓಟ್ಸ್ ತಿನ್ನುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.

ಹೈ ಕೊಲೆಸ್ಟ್ರಾಲ್ ಬಗ್ಗೆ ನಿಮ್ಮ ಕೂದಲೂ ನೀಡುತ್ತೆ ಸಂಕೇತ

* ತೂಕ ಹೆಚ್ಚಳ, ಟೈಪ್ 2 ಮಧುಮೇಹ:

ಮೊದಲನೆಯದಾಗಿ ತೂಕ ಹೆಚ್ಚಳ, ಟೈಪ್ 2 ಮಧುಮೇಹದಂತಹ ಸಮಸ್ಯೆಗಳಿಂದ ತೊಂದರೆಗೊಳಗಾದವರು, ಬೆಳಗಿನ ಉಪಾಹಾರದಲ್ಲಿ ಓಟ್ಸ್ ಅನ್ನು ತಿನ್ನಬೇಕು, ಇದು ತೂಕವನ್ನು ಕಳೆದುಕೊಳ್ಳಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೆಲಸ ಮಾಡುತ್ತದೆ.

* ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ:

ಆರೋಗ್ಯಕರವಾಗಿ ತೂಕ ಇಳಿಸುವುದು ಯಾವುದೇ ಸವಾಲಿಗಿಂತ ಕಡಿಮೆ ಇಲ್ಲ. ಇದಕ್ಕಾಗಿ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಉತ್ತಮವಾಗಿರಬೇಕು. ಓಟ್ಸ್‌ನಲ್ಲಿರುವ ಫೈಬರ್ ಹೊಟ್ಟೆಯನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತದೆ. ಪ್ರತಿದಿನ ಬೆಳಗಿನ ಉಪಾಹಾರದಲ್ಲಿ ಓಟ್ಸ್ ತಿನ್ನಲು ಪ್ರಾರಂಭಿಸಿದರೆ, ಮಲಬದ್ಧತೆಯಂತಹ ಯಾವುದೇ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

* ನಿದ್ರಾಹೀನತೆಯ ಸಮಸ್ಯೆ ದೂರವಾಗುತ್ತದೆ:

ಓಟ್ಸ್ ಮೆಲಟೋನಿನ್ ಮತ್ತು ಸಂಕೀರ್ಣ ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿದ್ದು ನಿದ್ರೆಯ ಹಾರ್ಮೋನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ

ನಿದ್ರಾಹೀನತೆಯ ಸಮಸ್ಯೆ

ದೂರವಾಗುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಯುವಕರು ಕನಿಷ್ಠ 8 ಗಂಟೆಗಳ ನಿದ್ರೆ ಪಡೆಯುವುದು ಅವಶ್ಯಕ. ಇದರಿಂದಾಗಿ ದೇಹದ ತೂಕವೂ ಕಡಿಮೆ ಆಗುತ್ತದೆ.

ಚಹಾದೊಂದಿಗೆ ಈ ಆಹಾರ ಸೇವಿಸುವ ಅಭ್ಯಾಸವಿದ್ದರೆ ಇಂದೇ ಬಿಟ್ಟು ಬಿಡಿ, ತಂದೊಡ್ಡಬಹುದು ಆರೋಗ್ಯ ಸಮಸ್ಯೆ

* ಹೃದ್ರೋಗಗಳ ತಡೆಗಟ್ಟುವಿಕೆ:

ಓಟ್ಸ್ ತಿನ್ನುವುದು ಹೃದಯದ ಆರೋಗ್ಯಕ್ಕೆ ಒಳ್ಳೆಯದು, ಏಕೆಂದರೆ ಇದರಲ್ಲಿ ಕಂಡುಬರುವ ಆಹಾರದ ಫೈಬರ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಇದರಿಂದ ಹೃದಯಾಘಾತ, ಪರಿಧಮನಿಯ ಕಾಯಿಲೆ ಮತ್ತು ಟ್ರಿಪಲ್ ನಾಳದ ಕಾಯಿಲೆಯ ಅಪಾಯವು ಕಡಿಮೆಯಾಗುತ್ತದೆ.

* ತ್ವಚೆಗೆ ಪ್ರಯೋಜನ:

ಓಟ್ಸ್ ತಿನ್ನುವುದು ನಿಮ್ಮ ಚರ್ಮದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಇದು ಚರ್ಮದ ಮೇಲೆ ಉರಿ, ತುರಿಕೆ, ಶುಷ್ಕತೆ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »