ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಶ್ರೀ ರೇಣುಕಾ ಪೀಠ ಮತ್ತು ಶ್ರೀ ನಾರಾಯಣ ಗುರು ಮಠದ ನಿಯೋಜಿತ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ ಪೀಠಾರೋಹಣದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.ಪೂನೆರೆದಿದ್ದ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿ ತಾರೀಕು 2.2.2022 ರಂದು ಸೋಲೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ಶ್ರೀ ರಕ್ಷಿತ್ ಶಿವರಾಮರವರು ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆಗೈದರು .ಕೇಂದ್ರ ಸಮಿತಿ ಸದಸ್ಯ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ .ಜಿಲ್ಲಾಧ್ಯಕ್ಷ ಪದ್ಮನಾಭ ಕೋಟ್ಯಾನ್. ಶ್ರೀ ಕ್ಷೇತ್ರ ಗೆಜ್ಜೆಗಿರಿ ಯ ಅಧ್ಯಕ್ಷ ಜಯಂತ ನಡುಬೈಲ್.ಮುಂತಾದವರು ಸಭೆಯನ್ನುದ್ದೇಶಿಸಿ ಮಾತನಾಡಿದರು.
ಉದ್ಯಮಿ ಲೋಕನಾಥ್ ಅಮೀನ್ ಪದ್ಮನಾಭ ಮಾಣಿಂಜ ರವಿ ಪೂಜಾರಿ ಚಿಲಿಂಬಿ ಶ್ರೀಮತಿ ವಿದ್ಯಾ ರಾಕೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ದೀಪಕ್ ಕೋಟ್ಯಾನ್ ರವರು ವಂದಿಸಿದರು.ವಿಜಯ ಕೋಟ್ಯಾನ್ ಮತ್ತು ಕೀರ್ತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.