TOP STORIES:

ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿ: ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ


ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರ ಇಂದಿನಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ.

ಇದಷ್ಟೇ ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ( Guideline ) ಜಾರಿಗೊಳಿಸಿದೆ. ಈ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ, ಯಾವುದಕ್ಕೆ ಇಲ್ಲ ಎನ್ನುವ ಬಗ್ಗೆ ಮುಂದೆ ಓದಿ..

ಈ ಬಗ್ಗೆ ರಾಜ್ಯ ಸರ್ಕಾರದ ( Karnataka Government ) ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ನೂತನ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ದಿನಾಂಕ 28-12-2021ರಿಂದ 07-01-2022ರವರೆಗೆ ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿದೆ.

ದಿನಾಂಕ 30-12-2021ರಿಂದ ದಿನಾಂಕ 02-01-2022ರವರೆಗೆ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ಪಬ್ ಗಳಲ್ಲಿ ಶೇ.50ರಷ್ಟು ಜನರು ಸೇರೋದಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಸಿಬ್ಬಂದಿಗಳು ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರವೇ ಅವಕಾಶ ನೀಡುವಂತೆ ಸೂಚಿಸಲಾಗಿದೆ.

ದಿನಾಂಕ 28-12-2022ರಿಂದ ಸಭೆ, ಸಮಾರಂಭ, ಕಾನ್ಫೆರೆನ್ಸ್, ಮದುವೆ ಸೇರಿದಂತೆ ಇತರೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳಿಗೆ 300 ಜನರಿಗೆ ಮಾತ್ರವೇ ಸೇರೋದಕ್ಕೆ ಅವಕಾಶ ನೀಡಲಾಗಿದೆ. ಈ ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇನ್ನೂ ರಾಜ್ಯದ ಗಡಿ ಭಾಗಗಳಲ್ಲಿ ಅದರಲ್ಲೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ತಪಾಸಣೆಗೆ ಹಾಗೂ ಕೋವಿಡ್ ನೆಗೆಟಿವ್, ಇಲ್ಲವೇ ಸಂಪೂರ್ಣ ಲಸಿಕೆ ಪಡೆದಿರೋ ವರದಿ ಕಡ್ಡಾಯವಾಗಿ ಪರಿಶೀಲಿಸುವಂತೆ ತಿಳಿಸಲಾಗಿದೆ.

ನೈಟ್ ಕರ್ಪ್ಯೂ ಸಂದರ್ಭದಲ್ಲಿ ಯಾವುಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.?

ನೈಟ್ ಕರ್ಪ್ಯೂ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶ ಇಲ್ಲ ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಕೇವಲ ತುರ್ತು ಸಂದರ್ಭದಲ್ಲಿ ಮಾತ್ರವೇ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಎಲ್ಲಾ ಕೈಗಾರಿಕೆಗಳಿಗೆ ರಾತ್ರಿ ವೇಳೆಯಲ್ಲಿ ಕಾರ್ಯ ನಿರ್ವಹಿಸೋದಕ್ಕೆ ಅನುಮತಿ ನೀಡಲಾಗಿದೆ. ನೌಕರರು ಐಡಿ ಕಾರ್ಡ್ ತೋರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಟೆಲಿಕಾಂ, ಇಂಟರ್ನೆಟ್ ಪ್ರವೈಡರ್ ಓಡಾಟಕ್ಕೂ ಅವಕಾಶ ನೀಡಲಾಗಿದೆ. ಅಗತ್ಯ ಸೇವೆ ಒದಗಿಸುವಂತ ಸಿಬ್ಬಂದಿಗಳ ಓಡಾಟಕ್ಕೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ.  ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಮೆಡಿಕಲ್ ಶಾಪ್ ಗಳು ನೈಟ್ ಕರ್ಪ್ಯೂ ಸಂದರ್ಭದಲ್ಲಿ ತೆರೆದಿರುತ್ತದೆ.  ಯಾವುದೇ ಕಮರ್ಷಿಯಲ್ ಶಾಪ್ ಗಳನ್ನು ತೆರೆಯೋದಕ್ಕೆ ಅವಕಾಶವಿಲ್ಲ
ಹೋಂ ಡಿಲಿವರಿ ಪುಡ್ ಸರಬರಾಜಿಗೆ ನೈಟ್ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾಗಿದೆ. ಗೂಡ್ಸ್ ವೆಹಿಕಲ್, ಟ್ರಕ್, ಗೂಡ್ಸ್ ಕ್ಯಾರಿಯರ್, ಖಾಲಿ ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ ಸಂದರ್ಭದಲ್ಲಿ ಬಸ್, ಟ್ರೈನ್, ಮೆಟ್ರೋ ರೈಲ್ ಹಾಗೂ ವಿಮಾನ ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ನೈಟ್ ಕರ್ಪ್ಯೂ ಸಂದರ್ಭದಲ್ಲಿ ಟ್ಯಾಕ್ಸಿ, ಬಸ್, ಆಟೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »