ಭರತ್‌ರಾಜ್ ಸನಿಲ್‌ಗೆ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ಮಂಗಳೂರು ಪ್ರಶಸ್ತಿಗೆ ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿಗಾರ ಭರತ್‌ರಾಜ್ ಕೆ. ಸನಿಲ್‌ಆಯ್ಕೆಯಾಗಿದ್ದಾರೆ.
ಸುವರ್ಣ ನ್ಯೂಸ್‌ನಲ್ಲಿ 2022ರ ಏ.19ರಂದು ಪ್ರಸಾರಗೊಂಡ “ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನಸೌಹಾರ್ದತೆಯ ಕಥೆ” ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ ಕುಂಪಲದ ಭರತ್‌ರಾಜ್ ಅವರಿಗೆ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ.
18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ ಬಿ.ಎಪತ್ರಿಕೋದ್ಯಮ ಪದವಿ ಪೂರೈಸಿದರು. ಬಿಟಿವಿ ನ್ಯೂಸ್ ಜಿಲ್ಲಾ ವರದಿಗಾರನಾಗಿ ಬಳಿಕ 2017ರಿಂದ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.