TOP STORIES:

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಪ್ರತಿಭಾ ಎನ್ ಪೂಜಾರಿ ಆಯ್ಕೆ.


ಬಂಟ್ವಾಳ ತಾಲೂಕಿನ ಪ್ರತಿಭಾ ಎನ್.ದರ್ಖಾಸು ಅವರಿಗೆ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸುವ ಅವಕಾಶ

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ...ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಸೂರಂಡೆ ನಿವಾಸಿಗಳಾದ ನಾರಾಯಣ ಪೂಜಾರಿ ಮತ್ತು ಶ್ರೀಮತಿ ದಂಪತಿಗಳ‌ ಪುತ್ರಿಯಾದ ಪ್ರತಿಭಾಅವರು ವಾಮದಪದವು ಸಮೀಪದ ಕುಡಂಬೆಟ್ಟು ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರನ್ನು ವಿವಾಹವಾಗಿದ್ದು, ಸಂಸಾರ ಸಹಿತ ಕಳೆದ ಕೆಲವು ವರ್ಷಗಳಿಂದ ದೋಹಾ ಕತಾರಿನಲ್ಲಿ ನೆಲೆಯಾಗಿದ್ದಾರೆ.

ಪ್ರತಿಭಾ ಎನ್.ದರ್ಖಾಸು ಅವರು ಕತಾರಿನ ಹಾಮದ್ ಮೆಡಿಕಲ್ ಕಾರ್ಪೋರೇಶನ್ ಸರಕಾರಿ ಅಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದು  ಕೊರೊನಾ ಸಹಿತ ಇತರ ಸಂದರ್ಭದಲ್ಲಿನ ಇವರ ವಿಶೇಷ ಸೇವೆಯನ್ನು ಗುರುತಿಸಿ ಈಗಾಗಲೇ  ಗೌರವಿಸಲಾಗಿತ್ತು.

ಇದೀಗ ಇವರು ಆರೋಗ್ಯ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ  ಅನನ್ಯ ಸೇವೆಯನ್ನು ಪರಿಗಣಿಸಿ ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ಟೀಮಿನಲ್ಲಿ ನರ್ಸಿಂಗ್ ಇನ್ಚಾರ್ಜ್ ಆಗಿ ಸೇವೆ ಸಲ್ಲಿಸಲು ಆಯ್ಕೆ ಮಾಡಲಾಗಿದೆ.

ಅಪೂರ್ವ ಸೇವೆಗೆ ಆಯ್ಕೆಯಾದ ಪ್ರತಿಭಾ ಎನ್.ದರ್ಖಾಸು ಅವರಿಗೆ ತುಳುನಾಡಿನಾದ್ಯಾಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »