ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ಕುತ್ತಿಲ ನಿವಾಸಿ, ಮಂಗಳೂರಿನ ಕರ್ಕೇರಾ ಟ್ರೇಡಿಂಗ್ ಕಂಪೆನಿಯ ಮಾಲಕ ಗುರುದಾಸ್ ಕರ್ಕೇರಾ(65.ವ) ರವರು ಅ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಕುತ್ತಿಲ ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಕೋಶಾಧಿಕಾರಿಯಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.