TOP STORIES:

ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು ಪೊಲೀಸ್ ಒಬ್ಬರು ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮನವಿ ಮಾಡಿದ ವಿಡಿಯೋ ಭಾರಿ ವೈರಲ್ ಆಗಿದೆ.

ಪಾಂಡೇಚೇರಿಗೆ ಕರ್ನಾಟಕದ ಬೈಕ್ ಸವಾರ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಸವಾರನಿಗೆ ದೂರದಿಂದಲೇ ಪೊಲೀಸರು ನಿಲ್ಲಿಸಲು ಮನವಿ ಮಾಡಿದ್ದಾರೆ. ಬೈಕ್ ಸವಾರ ಬೈಕ್ ನಿಲ್ಲಿಸಿದ ವೇಳೆ ತಮಿಳುನಾಡು ಪೊಲೀಸ್, ಕರ್ನಾಟಕವಾ? ಎಂದು ಕೇಳಿ, ಬಳಿಕ ಪೊಲೀಸ್ ಒಬ್ಬರು ತನ್ನ ಕೈಯಲ್ಲಿರುವ ಔಷಧವನ್ನು ತೋರಿಸಿ, ಇದು ಈಗಷ್ಟೆ ಹೋಗಿರುವ ಸರ್ಕಾರಿ ಬಸ್‌ನಲ್ಲಿರುವ ಒಬ್ಬರು ತಾಯಿಯ ಕೈಯಿಂದ ಬಿದ್ದಿದ್ದು, ಅವರಿಗೆ ಈ ಔಷಧ ತಲುಪಿಸಿ ಎಂದಿದ್ದಾರೆ.

ಇನ್ನು ಹೆದ್ದಾರಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದ ವೇಳೆ ಬಸ್‌ನ ಬದಿಯಲ್ಲಿ ಕುಳಿತಿದ್ದ ತಾಯಿಯ ಔಷಧಿ ಹೊರಬಿದ್ದಿದ್ದು, ಬಸ್ ವೇಗವಾಗಿ ಮುಂದೆ ಸಾಗಿದ ಕಾರಣ ಕೂಗಿದರೂ ಬಸ್ ಮುಂದೆ ಸಾಗಿದೆ.

ಹಾಗಾಗಿ ಪೊಲೀಸ್ ಔಷಧಿಯನ್ನು ಬೈಕ್ ಸವಾರನ ಬಳಿ ತಲುಪಿಸಲು ಹೇಳಿದ್ದು, ಔಷಧ ಸ್ವೀಕರಿಸಿದ ಕರ್ನಾಟಕದ ಬೈಕ್ ಸವಾರ ವೇಗವಾಗಿ ಬೈಕ್ ಚಲಾಯಿಸಿ ಬಸ್ ಚೇಸ್ ಮಾಡಿದ್ದಾನೆ. ಬಳಿಕ ಡ್ರೈವರ್ ಬಳಿ ಬಸ್ ನಿಲ್ಲಿಸುವಂತೆ ಸೂಚನೆ ನೀಡಿದ್ದು, ತಾಯಿಗೆ ಔಷಧವನ್ನು ನೀಡಿದ್ದಾರೆ.

ಇನ್ನು ಈ ಎಲ್ಲಾ ಘಟನೆ ಬೈಕ್ ಸವಾರ ಹೆಲ್ಮೆಟ್ ಕ್ಯಾಮಾರದಲ್ಲಿ ರೆಕಾರ್ಡ್ ಆಗಿದ್ದು, ಭಾರಿ ವೈರಲ್ ಆಗಿದೆ.

Video viral: ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »