ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅವರು ಮಾ.14ರ ಸೋಮಾವಾರ ಬೆಳಿಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಸೋಮವಾರ ಕರ್ನಾಟಕ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ರಾಜ್ಯಪಾಲರಿಗೆ ಕೇಂದ್ರದ ಮಾಜಿ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಸಾಲಮೇಳದ ಸಂಗ್ರಾಮ ಇಂಗ್ಲಿಷ್ ಅವತರಣಿಕೆ ನೀಡಲಾಯಿತು.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.