ಕಾರ್ಕಳ: ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರು 4939 ಅಂಕಗಳೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಕೆರ್ವಾಶೆ ಅಂಗು ಪೂಜಾರಿ ಹಾಗೂ ಜಯಂತಿ ದಂಪತಿ ಪುತ್ರಿಯಾಗಿರುವ ಅಕ್ಷತಾ ಕೆರ್ವಾಶೆ ಬಂಗ್ಲೆಗುಡ್ಡೆ ಶಾಲೆಯಲ್ಲಿ ತನ್ನ ಪ್ರಾಥಮಿಕ ವಿದ್ಯಾಭ್ಯಾಸ ಪೂರೈಸಿರುತ್ತಾರೆ. ಕೆರ್ವಾಶೆ ಮೈನ್ ಶಾಲೆ, ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಅಕ್ಷತಾ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪಿಯು ಮತ್ತು ಪದವಿ ಪೂರೈಸಿರುತ್ತಾರೆ.