ಕುದ್ರೋಳಿ: ಸಂಜೆ 3ರಿಂದ 7 ಪ್ರವೇಶ ನಿರ್ಬಂಧ
ಮಂಗಳೂರು: ಕುದ್ರೋಳಿ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುವ ಹಿನ್ನಲೆಯಲ್ಲಿ ಇಂದು (ಅ.13) ಸಂಜೆ 3.00ರಿಂದ 7.00ಗಂಟೆಯವರೆಗೆಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ದರುಶನಕ್ಕೆ ಅವಕಾಶ ನೀಡಲಾಗುವುದು.
ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತಾದಿಗಳುಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.