TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮ


ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯ ವತಿಯಿಂದ ಭಾನುವಾರ ಯೋಗಾಸನ ಸಹಿತ ಹನುಮಾನ್ ನಮಸ್ಕಾರ ಹಾಗೂ ಹನುಮಾನ್ ಚಾಲೀಸಾ ಪಠಣ ಹಾಗೂ ಅರ್ಚನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶ್ರೀ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಎಸ್.ಪಿ.ವೈ.ಎಸ್.ಎಸ್ ಜಿಲ್ಲಾ ಸಂಚಾಲಕರಾದ ಅಶೋಕ್ ಕುಮಾರ್ ಜೈನ್ , ಪ್ರಾಂತ ಸಂಚಾಲಕರಾದ ರವೀಶ್ ಕುಮಾರ್ ,ವಲಯ ಸಂಚಾಲಕರಾದ ಗೋಕುಲ್ ನಾಥ್ ಶೆಣೈ, ರಮಣೆ ಶೆಟ್ಟಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಬೆಳಗ್ಗೆ 4:45 ರಿಂದ 7:00 ಗಂಟೆಯವರೆಗೆ ಕಾರ್ಯಕ್ರಮ ನಡೆಯಿತು.

ಹನುಮಾನ್ ನಮಸ್ಕಾರ ಮತ್ತು ಹನುಮಾನ್ ಚಾಲಿಸ ಮಹತ್ವವನ್ನು ಕಾವೂರು ನಗರ ಸಂಚಾಲಕರಾದ ಕನಕ ಅಮೀನ್ ತಿಳಿಸಿದರು.
ಸಾವಿರಾರು ಯೋಗಪಟುಗಳು ಸಾರ್ವಜನಿಕರೊಂದಿಗೆ ಭಕ್ತಿಭಾವದಿಂದ ದೇವಾಲಯದ ಸುತ್ತಲೂ ಶಿಸ್ತುಬದ್ಧವಾಗಿ ಸಾಲಾಗಿ ಕುಳಿತು ಹನುಮಾನ್ ಚಾಲಿಸ ಪಠಿಸಿದರು.

ಪ್ರಾಂತ ಸಂಚಾಲಕರಾದ ಹರೀಶ್ ಕೋಟ್ಯಾನ್ , ಕ್ಷೇತ್ರದ ಕಾರ್ಯದರ್ಶಿ ಮಾಧವ,ವ್ಯವಸ್ಥಾಪಕ ವೀನಿತ್ ಜಿಲ್ಲಾ ಸಹಸಂಚಾಲಕರಾದ ಲಕ್ಷ್ಮೀನಾರಾಯಣ ,ಪ್ರತಾಪ್ ರಾವ್ ಜಿಲ್ಲಾ ಪ್ರಮುಖರಾದ ನಾರಾಯಣ ಶಬರಾಯ,ಚಂದ್ರಶೇಖರ, ನಗರ ಪ್ರಮುಖರಾದ ಹರೀಶ್ ಅಂಚನ್,ಆನಂದ ಕುಂಟಿನಿ, ಪ್ರಶಾಂತ್ ಈಶ್ವರ್ ಕೊಟ್ಟಾರಿ ಉಮೇಶ್,ವಸಂತ,ಪ್ರಸಾದ್ ಸಿದ್ದಕಟ್ಟೆ ಲೋಕೇಶ್ ಪೊಳಲಿ, ರೇಖಾ ,ಜಯಂತಿ ಕಟೀಲು,ಗೀತಾ ಶೆಟ್ಟಿ,ಜಯರಾಮ ಜೆಂಬುಗುಡ್ಡೆ ಪ್ರಭಾವತಿ ಭಾಗವಹಿಸಿದ್ದರು.ದಯಾನಂದ ಕಟೀಲು ಹಾಗೂ ತಂಡದವರು ಹನುಮಾನ್ ಚಾಲಿಸ ಪಠಣ ಮಾಡಿಸಿದರು. ಚೈತನ್ಯ ನಾಯಕ್ ನಿರೂಪಣೆ ಮಾಡಿದರು.

ಮಂಗಳೂರಿನ ಕದ್ರಿ,ಕಂಕನಾಡಿ, ಉಳ್ಳಾ ಲ, ಕಾವೂರು, ಸುರತ್ಕಲ್,ಪೊಳಲಿ ಮತ್ತು ಸುತ್ತಮುತ್ತಲಿನ ತಾಲೂಕು ಗಳಿಂದ ,ಬಿ.ಸಿ.ರೋಡ್, ಕಲ್ಲಡ್ಕದಿಂದ ಬಂದಿರುವ ಯೋಗಪಟುಗಳು ಭಾಗವಹಿಸಿದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »