ಗಣರಾಜ್ಯೋತ್ಸವ ಪರೇಡ್ ನಲ್ಲಿ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರದ ನಡೆಯಿಂದ ಸಮಸ್ತ ಹಿಂದುಳಿದ ಸಮಾಜಕ್ಕೆ, ಶ್ರೀ ಗುರುಗಳ ಕೋಟ್ಯಾಂತರ ಅನುಯಾಯಿಗಳ ಭಕ್ತಿ ಭಾವನೆಗಳಿಗೆ ನೋವುಂಟು ಮಾಡಿದೆ.
ಕೇಂದ್ರ ಸರಕಾರದಿಂದ ನಡೆದ ಈ ಪ್ರಮಾದವನ್ನು ತಕ್ಷಣ ಸರಿಪಡಿಸುವಂತೆ ಸನ್ಮಾನ್ಯ ಪ್ರಧಾನ ಮಂತ್ರಿಗಳಿಗೆ ಸಂಸದ ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮೂಲಕ ಅಖಿಲ ಭಾರತ ಬಿಲ್ಲವರ ಯೂನಿಯನ್ ಮನವಿ ಸಲ್ಲಿಸಿದೆ.
ಈ ಸಂದರ್ಭದಲ್ಲಿ ಯೂನಿಯನ್ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಡಿ. ಸುವರ್ಣ, ಮಹಿಳಾ ಸಂಘದ ಅಧ್ಯಕ್ಷರಾದ ಸುಮಲತ ಎನ್.ಸುವರ್ಣ, ಯೂನಿಯನ್ ಉಪಾಧ್ಯಕ್ಷರಾದ ಶ್ರೀ ಕೆ.ಲೋಕನಾಥ್, ಎ.ಜೆ.ಶೇಖರ್,ಪ್ರಧಾನ ಕಾರ್ಯದರ್ಶಿ ಸುಧೀರ್ ರಾಜ್, ಜತೆ ಕಾರ್ಯದರ್ಶಿ ಸುಖಲಾಕ್ಷಿ ವೈ. ಸುವರ್ಣ, ಖಜಾಂಚಿ ಬಿ.ದೇರಣ್ಣ, ಸಂಘಟನಾ ಕಾರ್ಯದರ್ಶಿ ಕೆ.ಟಿ.ಸುವರ್ಣ ಉಪಸ್ಥಿತರಿದ್ದರು.