TOP STORIES:

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ – ವಕೀಲರು . ಪದ್ಮರಾಜ್‌ ಆರ್


ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ

ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ ನಿರ್ದೇಶನದಶಿವಧೂತ ಗುಳಿಗೆ‘. ದೈವಾರಾಧನೆ ಎಂದರೆ ತುಳುನಾಡಿನ  ಧಾರ್ಮಿಕತೆ ಮತ್ತು ನಂಬಿಕೆ. ಇದು ಕೇವಲ ಆಚರಣೆಯಲ್ಲ; ತುಳುನಾಡಿನಬದುಕಿನ ಸಂಸ್ಕೃತಿಯೂ ಹೌದು ಎನ್ನುವುದನ್ನು ಅದ್ಭುತ ರಂಗಪ್ರಯೋಗದ ಮೂಲಕ ತೋರಿಸಿಕೊಟ್ಟರುಕೊಡಿಯಾಲ್‌ಬೈಲ್‌ರವರು. ಇದೀಗ ಇವರ ನಿರ್ದೇಶನದ  ಶಿವಧೂತ ಗುಳಿಗೆನಾಟಕದ ಬಗ್ಗೆ ರಾಜ್ಯದ ಗೃಹ ಸಚಿವ ಆರಗಜ್ಞಾನೇಂದ್ರ ಅವಹೇಳನ ಮಾಡಿರುವುದು ದೈವಾರಾದನೆ ಮಾತ್ರವಲ್ಲ ಕೋಟ್ಯಂತರ ಮಂದಿ ದೈವ ಭಕ್ತರಿಗೆ ಮಾಡಿದ ಅಪಮಾನ.

ತೀರ್ಥಹಳ್ಳಿಯಲ್ಲಿ ನಡೆದ ಶಿವಧೂತ ಗುಳಿಗೆ ನಾಟಕವನ್ನು ಸುಮಾರು 16 ಸಾವಿರ ಪ್ರೇಕ್ಷಕರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇ ಊರಲ್ಲಿ ಗೃಹಸಚಿವರು ಗುಳಿಗನ್ನು ಜಪಾನ್ ಮಾತ್ರೆಗೆ ಹೋಲಿಕೆ ಮಾಡಿರುವುದು ಎಷ್ಟು ಸರಿ? ಕೂಡಲೇ ಗೃಹಸಚಿವರುತುಳುನಾಡು ಸೇರಿದಂತೆ ದೈವ ಭಕ್ತರಲ್ಲಿ ಕ್ಷಮೆಯಾಚನೆ ಮಾಡಬೇಕು. ತುಳುನಾಡಿನ ದೈವಾರಾಧನೆ ಬಗ್ಗೆ ಇವರಿಗೇನು ಗೊತ್ತಿದೆ?. . ರಾಜ್ಯದ ಗೃಹ ಸಚಿವರಾಗಿ ದೈವಾರಾಧನೆ ಬಗ್ಗೆ ಪರಿಜ್ಞಾನ ಇಲ್ಲದೆ; ವಿವೇಚನೆ ರಹಿತವಾಗಿ ಮಾತನಾಡುವುದನ್ನು ಬಿಟ್ಟು, ಬಗ್ಗೆ ಜ್ಞಾನ‌ಇರುವವರಲ್ಲಿ ಮಾಹಿತಿ ಪಡೆದು ಮಾತನಾಡಲಿ. ಅದನ್ನು ಬಿಟ್ಟು ಇಂತಹ ಅರೆಜ್ಞಾನದ ಮಾತುಗಳಿಗೆ ತುಳುನಾಡಿನ‌ ಜನ ಎಂದಿಗೂಕ್ಷಮೆ ನೀಡಲಾರರು

ಪದ್ಮರಾಜ್‌ ಆರ್. ನೋಟರಿ ಮತ್ತು ವಕೀಲರು ಮಂಗಳೂರು

ಕೋಶಾಧಿಕಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »