TOP STORIES:

ಕೋವಿಡ್ ಮಾರ್ಗಸೂಚಿಪಾಲಿಸಿ ಮಂಗಳೂರು ದಸರಾ ಆಚರಣೆ


ಕೋವಿಡ್ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಹೇಳಿದರು.

ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕೋವಿಡ್ ಹಿನ್ನಲೆಯಲ್ಲಿ ಮಂಗಳೂರು ದಸರಾ ಈ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ದಸರಾ ಸಂದರ್ಭ ಕ್ಷೇತ್ರದ ಭೇಟಿ ನೀಡುವ ಸಂದರ್ಭ ಸ್ಯಾನಿಟೈಸರ್ , ಮಾಸ್ಕ್, ಥರ್ಮಲ್ ಸ್ಕ್ಯಾನ್ ಬಳಸಲು ಸೂಚನೆ ನೀಡಲಾಗುವುದು. ಇದಕ್ಕೆ ನಿದೇ೵ಶನ ನೀಡಲು ಪ್ರತಿನಿತ್ಯ 150ರಿಂದ 200ಸಂಖ್ಯೆಯ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರು ಮಾತನಾಡಿ, ಕೋವಿಡ್ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆಯನ್ನು ನಡೆಸುವುದು ಅನಿವಾರ್ಯವಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ-ನಿರ್ಗಮನ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ದಸರಾ ಯಶಸ್ವಿಯಾಗಲು ಎಲ್ಲರ ಸಹಕಾರವೂ ಅಗತ್ಯ ಎಂದರು.

ದೇವಸ್ಥಾನ ಕೋಶಾಧಿಕಾರಿ ಪದ್ಮರಾಜ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾದ೵ನ ಪೂಜಾರಿ ಅಭಿಲಾಷೆ, ಮಾರ್ಗದಶ೵ನದಂತೆ ಈ ಬಾರಿಯ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಸರಕಾರ ಮಾಗ೵ಸೂಚಿ ಅನುಸರಿಸಿ, ಧಾರ್ಮಿಕ ನಂಬಿಕೆ, ಸಂಪ್ರದಾಯ ಪ್ರಕಾರ ದಸರಾ ಮಹೋತ್ಸವ ನಡೆಯಲಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಇದಕ್ಕಾಗಿ ಕಾಯ೵ಕತ೵ರ ತಂಡವನ್ನು ರಚಿಸಲಾಗುವುದು ಎಂದರು.

ಸಭೆಯಲ್ಲಿ ಹಾಜರಿದ್ದ ನಾನಾ ಸಂಘಸಂಸ್ಥೆಗಳ ಮುಖಂಡರು, ಕ್ಷೇತ್ರದ ಭಕ್ತಾದಿಗಳು, ಮಹಿಳಾ ಸಮಿತಿ ಸದಸ್ಯರು ತಮ್ಮ ಸಲಹೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕಕೇ೵ರಾ ಉಪಸ್ಥಿತರಿದ್ದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »