ಬೆಳ್ತಂಗಡಿ: ಒಂದೇ ಜಾತಿ ಒಂದೇ ಮತ ಒಂದೇ ದೇವರು ಎನ್ನುವ ತತ್ತ್ವವನ್ನು ಮನುಕುಲಕ್ಕೆ ಸಾರಿದ ಸಮಾಜ ಸುಧಾರಕ ಬ್ರಹ್ಮಶ್ರೀನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಇಡೀ ಮನುಕುಲಕ್ಕೆ ಮಾಡಿದ ಅಪಚಾರ ಎಂದು ಬೆಳ್ತಂಗಡಿಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ .
ವಿಶ್ವದ ಮಾನವ ಜನಾಂಗದ ಅಭಿವೃದ್ದಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸಂತನ ನೆನಪಿಗಾಗಿ ಕೇರಳ ರಾಜ್ಯ ಕಳಿಸಿದಸ್ತಬ್ದಚಿತ್ರವನ್ನು ತಿರಸ್ಕರಿಸಿರುವುದು ಖಂಡನೀಯ, ಶತಮಾನದ ಹಿಂದಿನಿಂದಲೂ ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು, ಸಮಾನತೆಯಸುಧಾರಣೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಮಹಾನ್ ಸಂತರ ಸ್ತಬ್ದ ಚಿತ್ರಕ್ಕೆ ಅನುಮತಿ ನೀಡಬೇಕು, ಈಗಾಗಲೇ ಅನುಮತಿತಿರಸ್ಕರಿಸಿದ ಸಮಿತಿಯು ಕೂಡಲೇ ಈ ಬಗ್ಗೆ ಪುನರ್ ವಿಮರ್ಶಿಸಿ ಕ್ರಮ ಕೈಗೊಳ್ಳಬೇಕೆಂದು ರಕ್ಷಿತ್ ಶಿವರಾಂ ಒತ್ತಾಯಿಸಿದ್ದಾರೆ.