TOP STORIES:

FOLLOW US

ಗಣರಾಜ್ಯೋತ್ಸವ ಪರೇಡ್‌ : ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದ ಕೇಂದ್ರ ಸರಕಾರ


ನವದೆಹಲಿ : ಪ್ರತಿವರ್ಷದಂತೆ ಗಣರಾಜ್ಯೋತ್ಸವ ಪರೇಡ್‌ಗೆ ಸಿದ್ದತೆಗಳು ನಡೆದಿವೆ. ಪರೇಡ್‌ ಸಂದರ್ಭದಲ್ಲಿ ವಿವಿಧ ರಾಜ್ಯಗಳುಸ್ತಬ್ಧಚಿತ್ರಗಳನ್ನು ಪ್ರದರ್ಶಿಸುತ್ತವೆ. ಆದರೆ ಕೇಂದ್ರ ಸರಕಾರ ಬಾರಿ ಕೇರಳದ ನಾರಾಯಣಗುರು ಸ್ತಬ್ದಚಿತ್ರವನ್ನು ತಿರಸ್ಕರಿಸುವಮೂಲಕ ವಿವಾದವನ್ನು ಸೃಷ್ಟಿಸಿದೆ.

ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಯಾ ರಾಜ್ಯಗಳು ಸ್ತಬ್ದಚಿತ್ರಗಳನ್ನು ಪ್ರದರ್ಶಿಸುತ್ತವೆ. ಅದರಂತೆ ಕೇರಳಸರಕಾರ ನಾರಾಯಣಗುರು ಸ್ತಬ್ದ ಚಿತ್ರದ ಪ್ರಸ್ತಾಪವನ್ನು ಕಳಿಸಿತ್ತು. ಕೇರಳ ಕಳಿಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂʼಜಟಾಯುಪ್ಪಾರʼ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆಎಂದು ಮಲಿಯಾಳಂ ಪತ್ರಿಕೆಗಳು ವರದಿ ಮಾಡಿವೆ.

ಕೇರಳದ ಪ್ರಮುಖ ಪತ್ರಿಕೆಯಾಗಿರುವ ಮಾತೃಭೂಮಿಯು ಕುರಿತು ವರದಿ ಮಾಡಿದೆ. “ಕೇರಳ ಸರಕಾರವು ಜಟಾಯುಪ್ಪಾರದಹಿನ್ನೆಲೆಯುಳ್ಳ, ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದಪರೇಡ್‌ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು. ಇದರೊಂದಿಗೆ ಅದರ ಮುಂಭಾಗದಲ್ಲಿ ಮಹಾನ್ ಧಾರ್ಮಿಕ ಸುಧಾರಕರಾದ ಶ್ರೀನಾರಾಯಣ ಗುರುಗಳ ಪ್ರತಿಮೆಯನ್ನು ಇರಿಸುವುದಾಗಿ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು.

ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಗಳುಎಂಬ ವಿಷಯವನ್ನು ಇದು ಆಧರಿಸಿದೆ. ಸ್ತಬ್ಧ ಚಿತ್ರಗಳನ್ನು ಮೌಲ್ಯಮಾಪನ ಮಾಡಲು ಮತ್ತು ಶಿಫಾರಸು ಮಾಡಲು ರಕ್ಷಣಾ ಸಚಿವಾಲಯವು ನೇಮಿಸಿದ ತೀರ್ಪುಗಾರರುಎಲ್ಲಾ ಐದು ಸುತ್ತಿನ ಚರ್ಚೆಗಳಲ್ಲಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದರು. ಡಿಸೆಂಬರ್ 18 ರಂದು ನಡೆದ ಅಂತಿಮ ಸುತ್ತಿನಲ್ಲಿತೀರ್ಪುಗಾರರು ಸ್ಕೆಚ್ ಅನ್ನು ಅನುಮೋದಿಸಿದರು ಮತ್ತು ಸಂಗೀತ ಸಂಯೋಜಿಸಲು ನಿರ್ದೇಶಿಸಿದ್ದರು.

ಸ್ತಬ್ಧ ಚಿತ್ರವನ್ನು ಅನುಮೋದಿಸಲಾಗಿದೆ ಎಂಬ ಪತ್ರ ಬರದಿದ್ದ ಕಾರಣ ಕೇರಳ ಸರಕಾರವು ಕುರಿತು ವಿಚಾರಿಸಿದಾಗ, ಅನುಮೋದನೆಗೊಂಡ 12 ರಾಜ್ಯಗಳ ಪಟ್ಟಿಯಲ್ಲಿ ಕೇರಳ ರಾಜ್ಯದ ಹೆಸರಿರಲಿಲ್ಲ ಎಂದು ತಿಳಿದು ಬಂದಿದೆ. ಕೇಂದ್ರ ಸರಕಾರ ಕೇರಳಕ್ಕೆ ರೀತಿ ಅವಮಾನ ಮಾಡುತ್ತಿರುವುದು ಇದೇ ಮೊದಲಲ್ಲ. 2019, 2020 ರಲ್ಲೂ ತಿರಸ್ಕಾರ ಮಾಡಿ ಪರೇಡ್‌ ನಿಂದ ಹೊರಹಾಕಿತ್ತು. ಇನ್ನೊಂದು ಪ್ರಮುಖ ಸಂಗತಿ ಎಂದರೆ ಕೇರಳದ ಸ್ತಬ್ಧ ಚಿತ್ರವು ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.

ನಾರಾಯಣಗುರುಗಳ ಪ್ರತಿಮೆಯ ಸ್ಥಬ್ಧಚಿತ್ರವನ್ನು ತಿರಸ್ಕರಿಸಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಒಕ್ಕೂಟ ಸರಕಾರದ ನಿಲುವನ್ನು ಜನರು ಖಂಡಿಸುತ್ತಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »