ಚಿಕ್ಕಮಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರ ದಿವ್ಯಹಸ್ತದಿಂದ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಉಪಾಧ್ಯಕ್ಷರಾದ ಶ್ರೀ ರವಿ ಪೂಜಾರಿ ಚಿಲಿಂಬಿ ಜಾತ್ರೋತ್ಸವದ ಕೋಶಾಧಿಕಾರಿ ಶ್ರೀ ಶೇಖರ ಬಂಗೇರ ಜಿಲ್ಲಾ ಒಕ್ಕೂಟಗಳ ಅಧ್ಯಕ್ಷ ಎಚ್ ಎಂ ಸತೀಶ್ ಅಧ್ಯಕ್ಷರಾದ ವಾಸು ಪೂಜಾರಿ ಕ್ಷೇತ್ರದ ಜಿಲ್ಲಾ ಪ್ರತಿನಿಧಿ ಶ್ರೀ ಗಣೇಶ್ ಪೂಜಾರಿ , ಶ್ರೀ ರಾಜಪ್ಪ, ಪಿ.ಆರ್. ಸದಾಶಿವ ಹಾಗೂ ಜಿಲ್ಲೆಯ ಒಕ್ಕೂಟದ ವಿವಿಧ ಘಟಕಗಳ ಅಧ್ಯಕ್ಷರುಗಳು ಸಭೆಯಲ್ಲಿ ಹಾಜರಿದ್ದರು.