ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಛಾಯಾ ಸಿ. ಪೂಜಾರಿರಾಜ್ಯಮಟ್ಟಕ್ಕೆ ಆಯ್ಕೆ
ಪದವಿಪೂರ್ವ ಶಿಕ್ಷಣ ಇಲಾಖೆಯು ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಛಾಯಾ ಸಿ. ಪೂಜಾರಿ ಜಿಲ್ಲೆಗೆ ಚತುರ್ಥ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ ಹಾಗೂ ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನವಿದ್ಯಾರ್ಥಿಗಳು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.