ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ಪದ್ಮರಾಜ್ ಆರ್. ಮಾತನಾಡಿ, ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು. ಧರ್ಮದ ಹೆಸರಲ್ಲಿ ಸಂಘರ್ಷ ಮಾಡದೆ ಗುರುಗಳ ತತ್ವದಂತೆ ಸಮಾಜದಲ್ಲಿ ನಾವೆಲ್ಲರೂ ಒಂದೇ ಎನ್ನುವ ಭಾವನೆಯಿಂದ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಪ್ರತಿಷ್ಠಾನದ ಸ್ಥಾಪನೆಯಾದ 2 ವರ್ಷಗಳಿಂದ ಕರ್ನಾಟಕದಾದ್ಯಂತ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧ ನೀಡುತ್ತ ಬರಲಾಗಿದೆ. ಈ ವರ್ಷ ಕರ್ನಾಟಕ ರಾಜ್ಯಾದ್ಯಂತ 77 ಲಕ್ಷ ರೂ. ಪ್ರೋತ್ಸಾಹಧನವನ್ನು ವಿತರಿಸಲಾಗಿದೆ. ಅಲ್ಲದೆ ವೃದ್ಧರು, ಅಶಕ್ತರು, ಆರ್ಥಿಕವಾಗಿ ಹಿಂದುಳಿದವರು, ಬಡ ಅನಾರೋಗ್ಯಪೀಡಿತರಿಗೆ ಆರ್ಥಿಕ ಸಹಾಯ ನೀಡುತ್ತ ಬರಲಾಗುತ್ತಿದೆ. ಆರೋಗ್ಯ ಶಿಬಿರ, ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ, ಪದವೀಧರ ಯುವತಿ ಯುವಕರಿಗೆ ಕೌಶಲ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿ ಸಾರ್ವಜನಿಕರ ಸೇವೆಗೂ ಗಮನಹರಿಸಲಾಗುತ್ತಿದೆ ಎಂದು ಶ್ರೀ ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನ ಟ್ರಸ್ಟಿ ಕುಸುಮಾ ಅಜಯ್ ಅವರು ವಿವರಿಸಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ 172 ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ವಿತರಣೆ.
ಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ವೈ. ಸುವರ್ಣ, ಜೆ.ಪಿ.ನಾರಾಯಣ ಸ್ವಾಮಿ ಟ್ರಸ್ಟ್ ಟ್ರಸ್ಟಿ ಅಜಯ್ ಉಪಸ್ಥಿತರಿದ್ದರು. ಚಂದ್ರಶೇಖರ ನಾನಿಲ್ ಸ್ವಾಗತಿಸಿದರು.