TOP STORIES:

ದಕ್ಷಿಣ ಕನ್ನಡ ಮೂರ್ತೆದಾರಿಕೆಗೆ ತ್ವರಿತ ಅನುಮತಿ ನೀಡಲು ಜಿಲ್ಲಾಧಿಕಾರಿ ಸೂಚನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರ್ತೆದಾರಿಕೆ ಮಾಡಲು ಪರವಾನಿಗೆ ಕೋರಿ ಬಂದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೂರ್ತೆದಾರರ ಸಮಸ್ಯೆಗಳ ಕುರಿತು ಮೂರ್ತೆದಾರರ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು. ಮೂರ್ತೆದಾರರಿಗೆ ಪರವಾನಿಗೆ ಪ್ರಕ್ರಿಯೆ ಸರಳೀಕರಿಸಲು ರಾಜ್ಯ ಸರಕಾರ ಈ ಹಿಂದೆಯೇ ಪರವಾನಿಗೆ ಅಧಿಕಾರವನ್ನು ಅಬಕಾರಿ ಇಲಾಖೆಯಿಂದ ಕಂದಾಯ ಇಲಾಖೆಗೆ ಹಸ್ತಾಂತರಿಸಿದೆ. ಆದರೆ ಪರವಾನಿಗೆ ಶುಲ್ಕ ಪಾವತಿ ಬಗ್ಗೆ ಇಲಾಖೆಗಳ ನಡುವೆ ಗೊಂದಲ ಇದ್ದುದರಿಂದ ಪರವಾನಿಗೆ ನೀಡುವಾಗ ವಿಳಂಬವಾಗುತ್ತಿತ್ತು. ಈ ಬಗ್ಗೆ ಎರಡೂ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅರ್ಜಿಗಳನ್ನು ನಿಯಮಾನುಸಾರ ಸರಕಾರಿ ಅಥವಾ ಖಾಸಗಿ ಜಾಗದಲ್ಲಿದೆಯಾ, ಅಂಗಡಿ ಪರಿವರ್ತಿತ ಜಾಗದಲ್ಲಿದೆಯಾ, ಸ್ಥಳೀಯ ಸಂಸ್ಥೆ ಪರವಾನಿಗೆ ಪಡೆದಿದೆಯಾ ಮತ್ತಿತರ ಅಂಶಗಳನ್ನು ಪರಿಶೀಲಿಸಿ ಪರವಾನಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ತಹಶೀಲ್ದಾರರಿಗೆ ಸೂಚಿಸಿದರು. ಪರವಾನಿಗೆ ಪ್ರಕ್ರಿಯೆಯನ್ನು ಸಕಾಲ ಅಡಿಯಲ್ಲಿ ನೀಡಲು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿಗಳು ನುಡಿದರು. ಪರವಾನಿಗೆ ನಂತರ ಅಬಕಾರಿ ಇಲಾಖೆಯವರು ಮಾರಾಟ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಮೂರ್ತೆದಾರಿಕೆ ಪರವಾನಿಗೆಯನ್ನು 5 ವರ್ಷಗಳಿಗೆ ವಿಸ್ತರಿಸುವ ಬೇಡಿಕೆ ಸಂಬಂಧ ಪರಿಶೀಲಿಸಿ, ಅಗತ್ಯಬಿದ್ದರೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ತಿಳಿಸಿದ ಡಾ. ಕೆ.ವಿ. ರಾಜೇಂದ್ರ, ಮೂರ್ತೆದಾರಿಕೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರೇ ಇರುವುದರಿಂದ, ಇವರಿಗೆ ಇತರೆ ನೆರವು ನೀಡಲು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಅಬಕಾರಿ ಉಪ ಆಯುಕ್ತೆ ಶೈಲಜಾ ಕೋಟೆ, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಬಂಟ್ವಾಳ ತಹಶೀಲ್ದಾರ್ ರಶ್ಮಿ, ಮೂರ್ತೆದಾರರ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »