TOP STORIES:

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಯಲ್ಲಿ ಔಷಧೀಯ ಸಸಿ ನಾಟಿ ಅಭಿಯಾನ ಕ್ಕೆ ಚಾಲನೆ


ಗುರುಬೆಳದಿಂಗಳು ಕುದ್ರೋಳಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಮಹಾಮಾತೆ ದೇಯಿ ಬೈದೆತಿಯ ಸಂಕಲ್ಪದಂತೆ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ತತ್ವದಂತೆ ಚರ್ಚ್, ದರ್ಗಾ, ಬಸದಿ, ದೈವಸ್ಥಾನ, ದೇವಸ್ಥಾನ, ಗುರುದ್ವಾರ, ಗರೋಡಿಗಳಲ್ಲಿ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ನೆಡುವ ಯೋಜನೆಗೆ ಶ್ರೀ ಗೆಜ್ಜೆಗಿರಿ ನಂದನಬಿತ್ತ್‌ಲ್ ಕ್ಷೇತ್ರದಲ್ಲಿ ಶುಕ್ರವಾರ ಅದ್ದೂರಿ ಚಾಲನೆ ದೊರಕಿತು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ, ಗುರುಪೂಜೆ ನೆರವೇರಿತು. ಗುರು ಬೆಳದಿಂಗಳು ಸಂಸ್ಥೆ ಅಧ್ಯಕ್ಷ ಪದ್ಮರಾಜ್ ಆರ್., ಕುದ್ರೋಳಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ಸುವರ್ಣ, ಅನುಷ್ಕಾ ಬಿಲ್ಡರ್ಸ್‌ನ ಕಿಶೋರ್ ದಂಡೆಕೇರಿ, ಗುರು ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಂ.ಜಯಾನಂದ, ಯುವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಜಯರಾಮ ಕಾರಂದೂರು, ಅಶೋಕ್ ಕುಮಾರ್, ಡೆಕೊರೇಟರ್ ರೋಹಿದಾಸ್, ಪರಿಸರ ಪ್ರೇಮಿ ಮಾಧವ ಉಳ್ಳಾಲ್, ನಮ್ಮ ಕುಡ್ಲ ಚಾನೆಲ್ ನಿರ್ದೇಶಕ ಲೀಲಾಕ್ಷ ಕರ್ಕೇರ, ಉರ್ವ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾದ ಬಿ.ಪಿ ಹರೀಶ್, ಕುದ್ರೋಳಿ ದೇವಳದ ಮ್ಯಾನೇಜರ್ ವಿನೀತ್ ಕುಮಾರ್, ರಾಮಚಂದ್ರ, ಶೋಭಾ ಮೊದಲಾದವರಿದ್ದರು.

ಶ್ರೀಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ,ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ ಕಾರ್ಯದರ್ಶಿ, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಕೆ‌.ಬಿ ರಾಜರಾಮ್, ಪ್ರಮುಖರಾದ ಶ್ರೀಕರ್ ಪ್ರಭು, ರಘುನಾಥ್ ಮಾಬೆನ್ ಉಡುಪಿ, ಚಂದ್ರಕಾಂತ್ ಶಾಂತಿವನ, ಪ್ರವೀಣ್ ನೆಟ್ಟಾರ್, ರಾಮಚಂದ್ರ ಪೂಜಾರಿ ದೇರೆಬೈಲ್, ಹರೀಶ್ ಪೂಜಾರಿ ಮಂಗಳೂರು, ಪ್ರವೀಣ್ ಅಂಚನ್ ಅರ್ಕುಳ, ರಾಜೇಶ್‌ ಸುವರ್ಣ, ಜನಾರ್ದನ ಪೂಜಾರಿ ಪಡುಮಲೆ ಚಂದ್ರಶೇಖರ್ ಸಾಲಿಯಾನ್ ಕಲ್ಲಡ್ಕ ಸದಾನಂದ ಪೂಜಾರಿ ಬರಿಮಾರ್, ಸುರೇಶ್ ಪೂಜಾರಿ ಪಣಂಬೂರು, ಸದಾನಂದ ಕುಳಾಯಿ, ಪುಣ್ಯಭೂಮಿ ತುಳುನಾಡ ಸೇವಾ ಫೌಂಡೇಶನ್‌ನ ಚಂದ್ರಶೇಖರ ಪೂಜಾರಿ ಮೊದಲಾದವರಿದ್ದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »