ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ನವೆಂಬರ್ 29 ರಿಂದ ದ್ವಿತೀಯ ಪಿಯುಸಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆಯನ್ನು ಪಬ್ಲಿಕ್ ಪರೀಕ್ಷೆಯಾಗಿ ನಡೆಸಲು ಮುಂದಾದ ಕ್ರಮಕ್ಕೆ ವಿದ್ಯಾರ್ಥಿಗಳಿಂದ ವಿರೋಧ, ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಜಿಲ್ಲೆ, ತಾಲೂಕು ಕೇಂದ್ರಗಳ ಬದಲು ಆಯಾ ಕಾಲೇಜುಗಳಲ್ಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ ಎನ್ನಲಾಗಿದೆ.