TOP STORIES:

ದ.ಕ. ಜಿಲ್ಲಾ ಯುವವಾಹಿನಿ ಕೊಲ್ಯ ಘಟಕದಿಂದ ಬ್ರಹ್ಮ ಶ್ರೀ ನಾರಾಯಣ ಗುರು ಮಹಾಸಮಾಧಿಯ ಪುಣ್ಯದಿನ ಆಚರಣೆ


ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ, ಸೋಮೇಶ್ವರ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಕೊಲ್ಯ ಘಟಕ ಇದರ ವತಿಯಿಂದ, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಲೋಕ ಮುಖಕ್ಕೆ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪುಣ್ಯ ದಿನದ ಅಂಗವಾಗಿ ವಿಶೇಷ ಭಜನಾ ಸೇವೆ ಹಾಗೂ ವಿಶೇಷ ಮಹಾಪೂಜೆ ಯು ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ ಕೊಲ್ಯ ಇಲ್ಲಿ ನೆರವೇರಿತು.

ಯುವವಾಹಿನಿ (ರಿ.)ಕೊಲ್ಯ ಘಟಕವು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 167 ನೇ ಜನ್ಮ ಜಯಂತಿಯ ಅಂಗವಾಗಿ ಅಂತರ್ಜಾಲದಲ್ಲಿ ಏಪರ್ಡಿಸಿದ ಗುರುಶ್ಲೋಕ ಕಂಠಪಾಠ,ಗಾಯನ ಸ್ಪರ್ಧೆ “ಶ್ರೀ ಗುರುಶೃತಿ-2021” ಇದರ ಬಹುಮಾನ ವಿತರಣಾ ಸಮಾರಂಭವು ನಾರಾಯಣ ಗುರು ಸಭಾಭವನದಲ್ಲಿ ನೆರವೇರಿತು.

ಸಭಾಕಾರ್ಯಕ್ರಮ ವನ್ನು ಯುವವಾಹಿನಿ (ರಿ.)ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಇವರು ಉದ್ಘಾಟಿಸಿ ಮಾತನಾಡಿದರು ಹಾಗೂ ಸಭಾಧ್ಯಕ್ಷತೆಯನ್ನು ಯುವವಾಹಿನಿ(ರಿ.)ಕೊಲ್ಯ ಘಟಕದ ಅಧ್ಯಕ್ಷರಾದ ಮೋಹನ್ ಮಾಡೂರು ವಹಿಸಿದ್ದರು.

ಯುವವಾಹಿನಿ(ರಿ.)ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಜಗದೀಶ್ಚಂದ್ರ ಡಿ.ಕೆ ಮೂಡುಬಿದಿರೆ ಮತ್ತು ಯುವಸಿಂಚನ ಪತ್ರಿಕೆಯ ಸಂಪಾದಕ ದೇವರಾಜ್ ಅಮೀನ್ ಬಜ್ಪೆ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಆನಂದ ಮಲಯಾಳಕೋಡಿ, ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ, ಸಮಿತಿಯ ಅಧ್ಯಕ್ಷರು ಪದ್ಮನಾಭ ಕೊಲ್ಯ,ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರದ ನಿರ್ದೇಶಕರಾದ ಶ್ರೀಮತಿ ಅರ್ಚನಾ.ಎಂ.ಬಂಗೇರ, ನಾರಾಯಣ ಗುರು ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮ ಭರತ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

“ಗುರುಶೃತಿ-2021” ಸ್ಪರ್ಧೆಯು ಕ್ರಮವಾಗಿ ಮೂರು ವಿಭಾಗಗಳಲ್ಲಿ ಆಯೋಜನೆಗೊಂಡಿದ್ದು ವಿವಿಧ ಸಮಾಜದ ಬಂಧುಗಳು ಜಾತಿ ಮತ ಭೇದವಿಲ್ಲದೆ ಭಾಗವಹಿಸಿ, ದೂರದ ಊರು ಶಿವಮೊಗ್ಗ, ವಿರಾಜ್ ಪೇಟೆ ಹಾಗೂ ನಮ್ಮೂರಿನ ಪ್ರತಿಭೆಗಳು ಈ ಸ್ಪರ್ಧೆಯಲ್ಲಿ ಬಹುಮಾನವನ್ನು ತಮ್ಮದಾಗಿಸಿಕೊಂಡಿರುವರು.

ಸ್ಪರ್ಧೆಯಲ್ಲಿ ನ್ಯಾಯಯುತ ತೀರ್ಪು ನೀಡಿ ಸಹಕರಿಸಿದ ಯುವ ಸಾಹಿತಿ ಡಾ.ಅರುಣ್ ಉಳ್ಳಾಲ್ ಮತ್ತು ಶಿಕ್ಷಕಿ,ಸಾಹಿತಿ ವಿಜಯಲಕ್ಷ್ಮಿ ಕಟೀಲು ಹಾಗೂ ಸಾಹಿತಿ ರಮಾನಾಥ ಕೋಟೆಕಾರು ಇವರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಹಲವು ವರ್ಷಗಳಿಂದ ಮಂದಿರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಪೂಜಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪುರುಷೋತ್ತಮ ಅಡ್ಕ,,,ಗೋಪಾಲ ಕೊಂಡಾಣ ಹಾಗೂ ಮಾಧವ ಪರ್ಯತ್ತೂರು ಇವರನ್ನು ಗುರುತಿಸಿ ವೇದಿಕೆಯಲ್ಲಿ ಗಣ್ಯರ ಸಮಕ್ಷಮದಲ್ಲಿ ಘಟಕದ ವತಿಯಿಂದ ಗೌರವಿಸಲಾಯಿತು.

ಶ್ರೀಮತಿ ವತ್ಸಲಾ ರಘುರಾಮ್ ಶ್ರೀಮತಿ ವಿನುತ ಬಾಲಕೃಷ್ಣ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುಂದರ ಸುವರ್ಣ ಸ್ವಾಗತಿಸಿ,ಪ್ರಾಸ್ತಾವಿಸಿದರು.
ಕಾರ್ಯದರ್ಶಿ ಶಿರಲ್ ಕೊಲ್ಯ ವಂದಿಸಿದರು.ಸುಧಾ ಸುರೇಶ್ ಕೊಲ್ಯ,ಲತೀಶ್ ಎಂ.ಸಂಕೊಳಿಗೆ,ಸೌಮ್ಯ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »