ಮಂಗಳೂರು: “ದ.ಕ. ಜಿಲ್ಲೆಯಲ್ಲಿ ಜೂನ್.23ರಿಂದ ಎಲ್ಲಾ ಅಂಗಡಿಗಳು ತೆರೆಯಲು ಅವಕಾಶ ನೀಡಲಾಗಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ತೆರೆಯಲು ಅವಕಾಶ ನೀಡಲಾಗಿದೆ” ಎಂದರು.
ಇನ್ನು “ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಕರಣಗಳು ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕೊರೊನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು” ಎಂದು ಸಚಿವರು ತಿಳಿಸಿದ್ದಾರೆ.