TOP STORIES:

‘ನಮ್ಮ ದಸರಾ- ನಮ್ಮ ಸುರಕ್ಷೆ’ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್‌ 7 ರಿಂದ 16 ರವರೆಗೆ.


ಮಂಗಳೂರು: ‘ನಮ್ಮ ದಸರಾ- ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ವರ್ಷದ ಮಂಗಳೂರು ದಸರಾ ಮಹೋತ್ಸವ ಅಕ್ಟೋಬರ್‌ 7 ರಿಂದ 16 ರವರೆಗೆ ನಡೆಯಲಿದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿವೆ

 

 

 

ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಚ್. ಎಸ್. ಸಾಯಿರಾಂ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರಕಾರದ ಮಾರ್ಗಸೂಚಿ ಪ್ರಕಾರವೇ ದಸರಾ ನಡೆಸುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದು, ಅದರಂತೆಯೇ ಈ ಬಾರಿಯ ಎಲ್ಲ ಉತ್ಸವಗಳು ನಡೆಯಲಿದೆ. ಶಾರದಾ ಮೂರ್ತಿಯ ವಿಸರ್ಜನೆಯಂದು ದಸರಾ ಮೆರವಣಿಗೆ ಇರುವುದಿಲ್ಲ. ಧಾರ್ಮಿಕ ಕಾರ್ಯಕ್ರಮಗಳು ಯಥಾವತ್ತಾಗಿ ನೆರವೇರಲಿವೆ. ಪ್ರತಿನಿತ್ಯ ಮಧ್ಯಾಹ್ನ12.30 ರಿಂದ 2.30 ರ ತನಕ ಅನ್ನಸಂತರ್ಪಣೆ ಇರಲಿದೆ ಎಂದು ಹೇಳಿದರು.

ಮಂಗಳೂರು ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವರ್ಚುವಲ್ ಮಾದರಿಯಲ್ಲಿ ನಡೆಸಲಾಗುತ್ತಿದ್ದು, ಸ್ಥಳೀಯ ಟಿವಿ ಚಾನೆಲ್‌ಗಳ ಮೂಲಕ ನೇರ ಪ್ರಸಾರವಾಗಲಿದೆ ಎಂದು ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು.

ದಸರಾ ಕಾರ್ಯಕ್ರಮಗಳು:
ಅ.7ರಂದು ಮಹಾನವಮಿ ಉತ್ಸವ ಆರಂಭ. ಬೆಳಗ್ಗೆ 9 ಕ್ಕೆ ಗುರುಪ್ರಾರ್ಥನೆ 11.30ಕ್ಕೆ ಕಲಶ ಪ್ರತಿಷ್ಠೆ ಹಾಗೂ 11.40ಕ್ಕೆ ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ. 12.30 ಕ್ಕೆ ಪುಷ್ಪಾಲಂಕಾರ ಮಹಾ ಪೂಜೆ, ಸಂಜೆ 7 ಕ್ಕೆ ಭಜನೆ, ರಾತ್ರಿ 8.30 ರಿಂದ ಶ್ರೀದೇವಿ ಪುಷ್ಪಾಲಂಕಾರ ಮಹಾ ಪೂಜೆ ಮತ್ತು ಉತ್ಸವ ನಡೆಯಲಿದೆ.

ವಿಶೇಷ ಪೂಜೆಗಳು: ಅ. 8 ರಂದು ಬೆಳಗ್ಗೆ 10 ಕ್ಕೆ ದುರ್ಗಾ ಹೋಮ, ಅ. 9 ರಂದು ಆರ್ಯ ದುರ್ಗಾ ಹೋಮ, ಅ. 10 ರಂದು ಭಗವತೀ ದುರ್ಗಾ ಹೋಮ, ಅ. 11 ರಂದು ಕುಮಾರಿ ದುರ್ಗಾ ಹೋಮ, ಅ.12 ರಂದು ಮಹಿಷ ಮರ್ದಿನಿ ದುರ್ಗಾ ಹೋಮ, ಅ. 13ರಂದು ಚಂಡಿಕಾ ಹೋಮ, ಅ. 14 ರಂದು ಸರಸ್ವತಿ ದುರ್ಗಾ ಹೋಮ, 11.30ಕ್ಕೆ ಶತ ಸೀಯಾಳಾಭಿಷೇಕ ನಡೆಯಲಿದೆ.

ಅ. 15 ರಂದು ವಾಗೀಶ್ವರಿ ದುರ್ಗಾ ಹೋಮ, 12.30 ಕ್ಕೆ ಶಿವ ಪೂಜೆ, 7 ರಿಂದ ಶ್ರೀದೇವಿ ಪುಷ್ಪಾಲಂಕಾರ, ಮಹಾ ಪೂಜೆ, ಉತ್ಸವ, ರಾತ್ರಿ 8 ಕ್ಕೆ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ಅವಭೃತ ಸ್ನಾನ. ಅ. 16 ರಂದು ರಾತ್ರಿ 7 ಕ್ಕೆ ಭಜನೆ, 7.30 ರಿಂದ ಗುರು ಪೂಜೆ ನಡೆಯಲಿದೆ.

ದೇವರ ದರ್ಶನಕ್ಕೆ ನಿಬಂಧನೆಗಳು: ಕ್ಷೇತ್ರಕ್ಕೆ ಆಗಮಿಸುವ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ. ಮಾಸ್ಕ್ ಇಲ್ಲದವರಿಗೆ ಪ್ರವೇಶ ನಿಷೇಧಿಸಲಾಗುತ್ತದೆ. ದೇವಸ್ಥಾನದ ಪ್ರಾಂಗಣ ಪ್ರವೇಶಿಸುವ ಮೊದಲು ಥರ್ಮಲ್ ಸ್ಕ್ಯಾನಿಂಗ್‌ಗೆ ಒಳ ಪಡಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳ ಬೇಕು. ದೇಗುಲದ ವಠಾರ ಮತ್ತು ಒಳಗೆ, ದರ್ಬಾರು ಮಂಟಪದಲ್ಲಿ ಮೊಬೈಲ್ ಬಳಕೆ, ಫೋಟೊ, ಸೆಲ್ಫಿ ನಿಷೇಧಿಸಲಾಗಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಂಗಳೂರು ದಸರಾ ಮಹೋತ್ಸವ ಸಂದರ್ಭ ರಾಜಬೀದಿ ಅಲಂಕಾರದ ಸಂಪೂರ್ಣ ಜವಾಬ್ದಾರಿಯನ್ನು ಮಂಗಳೂರು ಮಹಾನಗರಪಾಲಿಕೆ ವಹಿಸಿಕೊಂಡಿರುವುದು ನಿಜಕ್ಕೂ ದಸರಾ ಉತ್ಸವಕ್ಕೆ ಮತ್ತೊಂದು ಹಿರಿಮೆಯಾಗಿದೆ. ಇದಕ್ಕೆ ಕಾರಣಕರ್ತರಾದ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಕಮಿಷನರ್ ಅಕ್ಷಯ್ ಶ್ರೀಧರ್ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಎಲ್ಲ ಮನಪಾ ಕಾರ್ಪೊರೇಟರ್‌ಗಳಿಗೆ ಕೃತಜ್ಞತೆಗಳು ಎಂದು ಅಭಿವೃದ್ಧಿ ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ್ ತಿಳಿಸಿದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »