TOP STORIES:

ನಾರಾಯಣಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ನಿರಾಕರಣೆ ಹಿಂದುಳಿ‌ದ‌ ಸಮಾಜಕ್ಕೆ ಮಾಡಿರುವ ಅವಮಾನ: ಕೇಂದ್ರದ ನಡೆಯ ವಿರುದ್ದ ಮಾಜಿ ಶಾಸಕ‌ ಗೋಪಾಲ‌ ಪೂಜಾರಿ ಆಕ್ರೋಶ


ಕುಂದಾಪುರ: ಕುಂದಾಪುರ: ಗಣರಾಜ್ಯೋತ್ಸವ ಆಚರಣೆಗೆ ಕೇರಳ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ನಾರಾಯಣಗುರುಗಳಸ್ತಬ್ಧಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರದ ನಡೆ ಅತ್ಯಂತ ಖಂಡನೀಯ. ಸಾಮಾಜಿಕ ಸುಧಾರಣೆಯಕ್ರಾಂತಿಗೆ ಕಾರಣರಾದ ದೇಶ ಕಂಡ ಸರ್ವಶ್ರೇಷ್ಠ ಸಂತರ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‍ಗೆ ಕೇಂದ್ರ ಸರ್ಕಾರನಿರಾಕರಿಸಿರುವುದು ಇಡೀ ಹಿಂದುಳಿದ ಸಮಾಜಕ್ಕೆ ಮಾಡಿರುವ ಅವಮಾನ ಎಂದು ಬೈಂದೂರಿನ ಮಾಜಿ ಶಾಸಕ ಕೆ ಗೋಪಾಲಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಾನುವಾರ ಹೆಮ್ಮಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕೇರಳ ಸರ್ಕಾರನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರದರ್ಶನಕ್ಕೆ ಅನುಮತಿ ಕೋರಿ ಕೇಂದ್ರಕ್ಕೆ ಕಳುಹಿಸಿದ ಮನವಿಯನ್ನು ತಿರಸ್ಕರಿಸಿದೆ. ಈಗಾಗಲೇ ಮಾಡಿರುವ ನಿರಾಕರಣೆಯನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರುಪ್ರತಿಭಟನೆ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹಿಂದೂಗಳ ಹೆಸರಿನಲ್ಲಿ ಅಧಿಕಾರದ ಗದ್ದುಗೆ ಏರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕೇಂದ್ರ ಸರ್ಕಾರದ ಹಿಡನ್ ಅಜೆಂಡಾಇದೀಗ ಬಟಾಬಯಲಾಗಿದೆ. ಮಾನವರೆಲ್ಲರೂ ಒಂದೇ ಜಾತಿ ಒಂದೇ ಮತ ಎನ್ನುವ ಮೂಲಕ ಹಿಂದೂ ಧರ್ಮದ ಹುಳುಕುಗಳವಿರುದ್ದ ಜಾಗೃತಿ ಮೂಡಿಸಿ, ಶೋಷಿತ ಸಮುದಾಯದವರಿಗೂ ದೇವಾಲಯಗಳ ಪ್ರವೇಶದ ಹಕ್ಕಿದೆ ಎಂದು ಸಾಮಾಜಿಕ ನ್ಯಾಯದಮೂಲಕ ಹೊಸ ದಾರಿಯನ್ನು ತೋರಿಸಿಕೊಟ್ಟ ಕೇರಳದ ಸಾಮಾಜಿಕ ಕ್ರಾಂತಿಗೆ ಕಾರಣೀಕರ್ತರಾದ ನಾರಾಯಣ ಗುರುಗಳ ಸ್ತಬ್ಧಚಿತ್ರತಿರಸ್ಕಾರ ಮಾಡಿರುವುದು ಅಜಾÐನದ ಪರಮಾವಧಿ ಎಂದು ಕಟುವಾಗಿ ಟೀಕಿಸಿದ ಅವರು, ಕೂಡಲೇ ಸರ್ಕಾರ ಎಚ್ಚೆತ್ತುಕೊಂಡುನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‍ಗೆ ಅಂಗೀಕಾರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »