TOP STORIES:

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಮಹಾಸಭೆ


ಉಡುಪಿ : ನಾರಾಯಣಗುರು ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2021 – 2022 ನೇ ಸಾಲಿನ 20ನೇಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಸೆಪ್ಟೆಂಬರ್‌ 11, ಭಾನುವಾರ ಬಿಲ್ಲವರ ಸೇವಾ ಸಂಘ (ರಿ), ಬನ್ನಂಜೆ ಉಡುಪಿ ಇದರಶಿವಗಿರಿ ಸಭಾಂಗಣದಲ್ಲಿ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ಎಸ್‌ ಕೆ ಸಾಲ್ಯಾನ್ ,ರಾಮಚಂದ್ರ ಕಿದಿಯೂರು ಮತ್ತು ಸೂರ್ಯಪ್ರಕಾಶ್ ಜಂಟಿಯಾಗಿ ಉದ್ಘಾಟಿಸಿ ಶುಭ ಹಾರೈಸಿದರು. ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿದ ಹರಿಶ್ಚಂದ್ರ ಅಮೀನ್ ಅವರು ಸರ್ವಸದಸ್ಯರುಗಳನ್ನು ಸ್ವಾಗತಿಸಿ ನಮ್ಮ ಬ್ಯಾಂಕ್ಭಾರತೀಯ ರಿಸರ್ವ್ ಬ್ಯಾಂಕಿನ ಮಾನ್ಯತೆಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, ನಮ್ಮ ಬ್ಯಾಂಕ್ ಅಧುನಿಕ ಸೌಲಭ್ಯಗಳಾದ ಕೋರ್ಬ್ಯಾಂಕಿಂಗ್ ,ಆರ್ ಟಿ ಜಿ ಎಸ್ / ನೆಪ್ಟ್ , ಸಿ ಟಿ ಎಸ್ ಚೆಕ್ ಕ್ಲಿಯರಿಂಗ್, ಸೇಫ್ ಲಾಕರ್ ಸೌಲಭ್ಯಗಳನ್ನು ಒಳಗೊಂಡಿದೆ . ಗ್ರಾಹಕರಐದು ಲಕ್ಷದವರೆಗಿನ ಠೇವಣಿಗಳಿಗೆ ಡಿ ಸಿ ಜಿ ಸಿ. ವಿಮಾ ಸೌಲಭ್ಯವನ್ನು ಹೊಂದಿದೆ . ಸ್ವಸಹಾಯ ಗುಂಪಿನ ಸದಸ್ಯರಿಗೆ ಅತ್ಯಂತಕಡಿಮೆ ಬಡ್ಡಿಯ ಸಾಲವನ್ನು ನೀಡುತ್ತಿದ್ದು ಚಿನ್ನಾಭರಣ ಈಡಿನ ಸಾಲ, ಗೃಹ ನಿರ್ಮಾಣ ಸಾಲ, ಅಡಮಾನ ಸಾಲ , ಭದ್ರತಾ ಸಾಲ , ವೈಯಕ್ತಿಕ ಸಾಲ , ವಾಹನ ಸಾಲ ವೇತನಾಧಾರಿತ ಸಾಲ ಹಾಗೂ ವ್ಯಾಪಾರ ಅಭಿವೃದ್ಧಿ ಸಾಲಗಳನ್ನು  ವಾಣಿಜ್ಯ ಬ್ಯಾಂಕಿನ ಬಡ್ಡಿ ದರಕ್ಕೆಸ್ಪರ್ಧಾತ್ಮಕವಾಗಿ ನೀಡಲಾಗುತ್ತದೆ .ಗ್ರಾಹಕರ ಠೇವಣಿಗೆ ಅತ್ಯಧಿಕ ಬಡ್ಡಿಯನ್ನು ನೀಡುತ್ತಿದ್ದು ಹಿರಿಯ ನಾಗರಿಕರಿಗೆ 0.5% ಹೆಚ್ಚುವರಿಯಾಗಿ ನೀಡಲಾಗುತ್ತಿದೆ. ಗ್ರಾಹಕರ ಹಾಗೂ ಆಡಳಿತ ಮಂಡಳಿಯ ಸಹಕಾರ ಸಿಬ್ಬಂದಿಗಳ ನಗುಮೊಗದ ಸೇವೆ ಸದಸ್ಯರಪ್ರೋತ್ಸಾಹದಿಂದ ನಮ್ಮ ಬ್ಯಾಂಕ್ ಉತ್ತಮ ಲಾಭವನ್ನು ಕಾಣುವಂತಾಗಿದೆ ಎಂದರು.

ಉಪಾಧ್ಯಕ್ಷರಾದ ವಿಜಯಾ ಜಿ ಬಂಗೇರ ಪ್ರಾಸ್ತಾವಿಕದ ಮೂಲಕ ವೇದಿಕೆಗೆ ಬರಮಾಡಿಕೊಂಡರು. ನಿರ್ದೇಶಕರಾದ ಕೆ. ಜಯಕುಮಾರ್‌, ಪ್ರಭಾಕರ ಬಂಗೇರ ಬಿ.ಬಿ. ಪೂಜಾರಿ, ನವೀನ್ ಅಮೀನ್, ಆನಂದ ಜತ್ತನ್ನ, ಡಿ.ಆರ್ ರಾಜು, ಶೇಕರ ಬಿ ಪೂಜಾರಿರಮೇಶ್ ಕೆ ಕೋಟ್ಯಾನ್ ,ಅಶೋಕ್ ಕುಮಾರ್ ,ಅರಣ್ ಜತ್ತನ್ನ      ವೃತ್ತಿಪರ ನಿರ್ದೇಶಕರಾದ ಬಾಸ್ಕರ ಪೂಜಾರಿ ಹಾಗೂ ಕೃಷ್ಣಬಿಲ್ಲವ ಸಭೆಯಲ್ಲಿ ಉಪಸ್ಥಿತರಿದ್ದರು.

ಸದಸ್ಯರಾದ ಗುರದತ್ ಅಮೀನ್ , ಕಟಪಾಡಿ ಶಂಕರ್ ಪೂಜಾರಿ, ರಮೇಶ್  ಬಂಗೇರ ,ಶೇಖರ್ ಕೋಟ್ಯಾನ್ ಮತ್ತು ಸುಲೋಚನಾದಾಮೋದರ್ ಇವರು ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿ ಬ್ಯಾಂಕನ್ನು ಲಾಭದತ್ತ ಮುನ್ನಡೆಸಿದ ಆಡಳಿತಮಂಡಳಿಯನ್ನು ಅಭಿನಂದಿಸಿದರು.

ಬ್ಯಾಂಕಿನ ನಿರ್ದೇಶಕರಾದ ಶಕುಂತಲ ಶ್ರೀನಿವಾಸ್ ಪ್ರಾರ್ಥಿಸಿ, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಫೌಸ್ಟಿನ್ಆಲ್ವರವರು ಬ್ಯಾಂಕಿನ 19ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ವರದಿಯನ್ನು ವಾಚಿಸಿದರು. ನಿರ್ದೇಶಕ ಶಿವಾಜಿ ಸುವರ್ಣಅವರು ಧನ್ಯವಾದವಿತ್ತರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »