TOP STORIES:

ಪಠ್ಯದಲ್ಲಿ ನಾರಾಯಣಗುರು ಪಾಠಕ್ಕೆ ಕತ್ತರಿ: ಉಗ್ರ ಹೋರಾಟ ನಡೆಸುವ ಎಚ್ಚರಿಕೆ


ಉಡುಪಿಯ ಕಟಪಾಡಿಯ ಬಿಲ್ಲವರ ಶಕ್ತಿ ಕೇಂದ್ರ ಶ್ರೀ ವಿಶ್ವನಾಥ ಕ್ಷೇತ್ರದಿಂದಲೇ ಇವತ್ತು ನಾರಾಯಣಗುರುಗಳ ಪಠ್ಯ ತೆರವು ಮಾಡಿದ್ದರ ವಿರುದ್ಧ ರಣಕಹಳೆ ಮೊಳಗಿತು. ಇದೇ ಮೊದಲ ಬಾರಿಗೆ ಎಲ್ಲ ಸಂಘಸಂಸ್ಥೆಗಳು, ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದೇ ಕಡೆ ಪ್ರತಿಭಟನೆ ದಾಖಲಿಸಿದ್ದು ವಿಶೇಷವಾಗಿತ್ತು.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಭಾರೀ ಸಂಖ್ಯೆಯ ಬಿಲ್ಲವ ಬಾಂಧವರು ಪಕ್ಷಬೇಧ ಮರೆತು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಈ ವೇಳೆ ಪ್ರೆತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲೆಯ ಬಿಲ್ಲವ ಮುಖಂಡರು‌ ರಾಜಕೀಯ ಮುಖಂಡರು ಈ ತಪ್ಪನ್ಬು ಸರಿಪಡಿಸದಿದ್ದರೆ ಮುಂದೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ನಾರಾಯಣ ಗುರುಗಳು ಅಸ್ಪೃಶ್ಯ ಸಮಾಜಕ್ಕೆ ಬೆಳಕು ನೀಡಿದವರು. ಅವರ ಪಠ್ಯವನ್ನು ಹತ್ತನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಿಂದ ತೆಗೆದದ್ದು ಅಕ್ಷಮ್ಯ ಅಪರಾಧ. ಈ ತಪ್ಪನ್ನು ಸರಕಾರ ಸರಿಪಡಿಸಬೇಕು.

ಪಠ್ಯಪುಸ್ತಕ ಸಮಿತಿಗೆ ಪರಿಶೀಲನೆಗೆ ಹೇಳಿದರೆ ಅವರು ಪರಿಷ್ಕರಣೆ ಮಾಡಿದ್ದಾರೆ.

ಇದನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು‌ ಪ್ರತಿಭಟನೆ ಮೂಲಕ ರವಾನಿಸಲಾಯಿತು.

ಈ ಸಂದರ್ಭ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಬಿ.ಎನ್ ಶಂಕರ್ ಪೂಜಾರಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಪದ್ಮರಾಜ್ ಮಂಗಳೂರು, ಕಟಪಾಡಿ ಶಂಕರ್ ಪೂಜಾರಿ, ರಮೇಶ್ ಕಾಂಚನ್ ,ವಿಶ್ವನಾಥ ಕ್ಷೇತ್ರದ ಪದಾಧಿಕಾರಿಗಳು ಬಿಲ್ಲವ ಮುಖಂಡರು ಉಪಸ್ಥಿತರಿದ್ದರು.

 

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »