ಸಮಾಜಸೇವೆ ಮಾಡುತ್ತಿರುವ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಸಂಘಟನೆಯಿಂದ ಕೊರೋನಾ ಈ ಸಂಕಷ್ಟದ ಸಮಯದಲ್ಲಿ ಕರಾವಳಿಗರಿಗೆ ಹಾಗೂ ಸಾರ್ವಜನಿಕರಿಗೆ ತುರ್ತು ಉಪಯೋಗದ ನಿಟ್ಟಿನಲ್ಲಿ ಉಚಿತ ಸುಸಜ್ಜಿತ ಆಕ್ಸಿಜನ್ ಒಳಗೊಂಡ ಹೈಟೆಕ್ ಅಂಬ್ಯುಲೆನ್ಸ್ ಸೇವೆಯನ್ನು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಲೋಕಾರ್ಪಣೆಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣದ ಶಾಸಕ ಶ್ರೀ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರದ ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ್ ಪೂಜಾರಿ, ಕಿಯೋನಿಕ್ಸ್ ಅಧ್ಯಕ್ಷ ಶ್ರೀ ಹರಿಕೃಷ್ಣ ಬಂಟ್ವಾಳ, ಕುದ್ರೋಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಎಚ್. ಎಸ್ ಸಾಯಿರಾಮ್, ಮೂಡ ಅಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್, ಶ್ರೀ ಕೆ.ಟಿ ಸುವರ್ಣ, ಜಗದೀಪ್ ಸುವರ್ಣ, ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಸದಸ್ಯರು ಹಾಜರಿದ್ದರು.
ಉಚಿತ ಅಂಬ್ಯುಲೆನ್ಸ್‌ಗಾಗಿ ಸಂಪರ್ಕಿಸಿ: 8277086334, 8310197377