TOP STORIES:

ಬಿಜೆಪಿಯವರು ಕೀಳು ರಾಜಕೀಯ ಮಾಡುವುದನ್ನು ಇನ್ನಾದರೂ ನಿಲ್ಲಿಸಲಿ: ಪದ್ಮರಾಜ್ ಆರ್.


ಪ್ರವೀಣ್ ನೆಟ್ಟಾರ್ ಪತ್ನಿಯ ಉದ್ಯೋಗದ ಬಗ್ಗೆ ಬಿಜೆಪಿಯವರು ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಇವರ ಇಂತಹ ಕಪಟ ನಾಟಕ ಸಾಮಾನ್ಯ ಜನತೆಗೆ ಈಗಾಗಲೇ ತಿಳಿದಿದೆ.

ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎನ್ನುವುದು ಬಿಜೆಪಿಯ ಶಾಸಕರು, ಸಂಸದರಿಗೆ ಸಾಮಾನ್ಯ ತಿಳಿವಳಿಕೆಯೂ ಇಲ್ಲವೆ? ಅದೇ ರೀತಿ ನೂತನ ಅವರ ಕೆಲಸವೂ ರದ್ದಾಗಿದೆ. ಬಿಜೆಪಿಯವರಿಗೆ ನೂತನ ಕುಮಾರಿಯವರ ಮೇಲೆ ಅಷ್ಟೊಂದು ಅಭಿಮಾನ ಇರುತ್ತಿದ್ದರೆ ಈ ಮೊದಲೇ ಯಾಕೆ ಅವರಿಗೆ ಶಾಶ್ವತ ಉದ್ಯೋಗ ಮಾಡಿಸಿಕೊಡಲು ಪ್ರಯತ್ನಿಸಿಲ್ಲ. ಅವರು ಇಷ್ಟು ದಿನವೂ ಮಾಡಿದ್ದೆಲ್ಲ ನಾಟಕ ಎಂದು ಇದರಿಂದ ಬಹಿರಂಗವಾಗಿದೆ.

ನೂತನರವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಖಂಡಿತವಾಗಿಯೂ ಬದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಪರವಾಗಿ ನೂತನ ಅವರಲ್ಲಿ ಮಾತುಕತೆ ನಡೆಸಿದ್ದೇವೆ. ಕೂಡಲೇ ಅವರಿಗೆ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಕೀಳುಮಟ್ಟದ ರಾಜಕೀಯದ ಮೂಲಕ ಜನರನ್ನು ಮತ್ತೆ ಮೂರ್ಖರನ್ನಾಗಿಸುವ ಕೆಲಸವನ್ನು ಬಿಡಲಿ.

ಇಂತಹ ಕೀಳು ರಾಜಕೀಯ ಮುಂದೆ ನಡೆಯುವುದಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ತಿಳಿಸಿದ್ದಾರೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »