TOP STORIES:

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 54 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಬಜಪೆ ಘಟಕ
ಸ್ಪಂದನ 54 ನೇ ಸೇವಾ ಯೋಜನೆ

ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತ್ರತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ 54ನೇ ಸೇವಾಯೋಜನೆಯಡಿಯಲ್ಲಿ ಸಹಾಯಧನವನ್ನು ದಿನಾಂಕ: 04.02.2021ನೇ ಗುರುವಾರದಂದು ಶಿಬರೂರು ನಿವಾಸಿ ಪೂವಪ್ಪ ಪೂಜಾರಿ ಇವರಿಗೆ ವೈದ್ಯಕೀಯ ನೆರವಿಗಾಗಿ ನೀಡಲಾಯಿತು.
ಪೂವಪ್ಪ ಪೂಜಾರಿ ಇವರು ಶಿಬರೂರಿನ ರಾಜೀವ‌ ನಗರದ ನಿವಾಸಿಯಾಗಿದ್ದು, ಜನವರಿ 4ನೇ ತಾರೀಕಿನಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇವರ ಆರ್ಥಿಕ ಪರಿಸ್ಥಿತಿ ತುಂಬಾ ಸಂಕಷ್ಟದಲ್ಲಿ ಇದೆ. ಇವರ ಕುಟುಂಬ ಅತಿ ಕಡುಬಡತನದಲ್ಲಿ ಇದ್ದು ಮುಂದಿನ ಚಿಕಿತ್ಸೆಗಾಗಿ ಹಣದ ಕೊರತೆಯಿರುವುದರಿಂದ ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಇವರ ಪರಿಸ್ಥಿತಿಯನ್ನು ಗಮನಿಸಿ ತಕ್ಷಣವೇ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಮುಖಾಂತರ ಇವರಿಗೆ ಆಸ್ಪತ್ರೆಯ ಖರ್ಚಿಗೆ ಧನಸಹಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರು ಪ್ರಶಾಂತ್‌ ಕುಮಾರ್ ಕೆಂಜಾರು ಕಾನ, ಕೀರ್ತನ್ ಅಮೀನ್ ಪೆರ್ಮುದೆ, ನಿರಂಜನ್ ಕರ್ಕೇರ ಪೋರ್ಕೊಡಿ, ಸಂದೇಶ್ ಶೆಟ್ಟಿ ‌ಜೋಕಟ್ಟೆ, ಪ್ರಸಾದ್ ಬೈದ್ಯ, ಜೀವನ್ ಪೆರ್ಮುದೆ, ರಮಾನಂದ ಪೂಜಾರಿ ಕಟೀಲು, ಅಖಿಲೇಶ್ ಅಮೀನ್ ಜೋಕಟ್ಟೆ, ಮನೀಶ್ ಪೂಜಾರಿ ಜೋಕಟ್ಟೆ ಉಪಸ್ಥಿತರಿದ್ದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »