TOP STORIES:

ಬಿರುವೆರ್ ಕುಡ್ಲ ಜನಪರ ಕೆಲಸ ಮಾಡಿದೆಯೇ ವಿನಃ ಶರಣ್ ಪಂಪ್‌ವೆಲ್‌ರಂತೆ ಸಮಾಜ ಒಡೆಯುವ ಕೆಲಸ ಮಾಡಿಲ್ಲ: ದೀಪು ಶೆಟ್ಟಿಗಾರ್


ಮಂಗಳೂರು, ನ.15: ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್‌ಗೆ ಮುಸ್ಲಿಮರ ಹಣ ಆಗುತ್ತದೆ. ಆದರೆ ಮುಸ್ಲಿಂ ಯುವಕರು ಯಾಕೆ ಆಗುವುದಿಲ್ಲ ಎಂದು ಬಿರುವೆರ್ ಕುಡ್ಲ ಮಂಗಳೂರು ಪ್ರಶ್ನಿಸಿದೆ. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲದ ಸಂಚಾಲಕ ಲಕ್ಷ್ಮೀಶ್ ಈ ಹಿಂದೆ ನಡೆದ ಸಭೆಯೊಂದರಲ್ಲಿ ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲ ಒಂದು ಜಾತಿಗೆ ಸೀಮಿತವಾಗಿದೆ ಎಂದಿದ್ದರು. ಬಿರುವೆರ್ ಕುಡ್ಲ ಸಮಾಜ ಸೇವೆಗಾಗಿ ಹುಟ್ಟಿಕೊಂಡ ಸಂಸ್ಥೆಯಾಗಿದೆ. ಏಳು ವರ್ಷಗಳಿಂದ ಸಂಸ್ಥೆಯು ಬಡವರಿಗೆ ಜಾತಿ ಭೇದ ನೋಡದೆ ಮೂರೂವರೆ ಕೋಟಿ ರೂ.ಗಳ ಸಹಾಯ ಮಾಡಿದೆ ಎಂದರು.


ಶರಣ್ ಪಂಪ್‌ವೆಲ್ ಬಿರುವೆರ್ ಕುಡ್ಲದ ಬಗ್ಗೆ ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಬಿರುವರ್ ಕುಡ್ಲ ಕಾನೂನು ಹೋರಾಟ ನಡೆಸಲಿದೆ ಎಂದು ಲಕ್ಷ್ಮೀಶ್ ತಿಳಿಸಿದರು.

ಬಿರುವೆರ್ ಕುಡ್ಲದ ದೀಪು ಶೆಟ್ಟಿಗಾರ್ ಮಾತನಾಡಿ ಶರಣ್ ಪಂಪ್‌ವೆಲ್ ಸಿಟಿ ಸೆಂಟರ್ ಸಹಿತ ಹಲವು ಮುಸ್ಲಿಮರ ಕೇಂದ್ರಗಳಿಂದ ಗುತ್ತಿಗೆ ಹಿಡಿದು ಸಾಕಷ್ಟು ಹಣ ಸಂಪಾದಿಸುತ್ತಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಹೋರಾಟ ಮಾಡುವ ಅವರಿಗೆ ಮುಸ್ಲಿಮರ ಸಂಸ್ಥೆಯ ಹಣವಾಗುತ್ತದೆ, ಆದರೆ ಮುಸ್ಲಿಂ ಯುವಕರು ಬೇಡವಾಗಿದೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ನಾವು ಹೆಣ ಹೊರುವುದರಿಂದ ಹಿಡಿದು ಮನೆ ಕಟ್ಟಿ ಕೊಡುವವರೆಗೆ ಸಮಾಜ ಸೇವೆ ಮಾಡುತ್ತಿದ್ದೇವೆ. ಬಲ್ಲಾಳ್‌ ಬಾಗ್‌ನಲ್ಲಿ ಬಿರುವೆರ್ ಕುಡ್ಲ ಜನಪರ ಕೆಲಸ ಮಾಡಿದೆಯೇ ವಿನಃ ಶರಣ್ ಪಂಪ್‌ವೆಲ್‌ರಂತೆ ಸಮಾಜ ಒಡೆಯುವ ಕೆಲಸ ಮಾಡಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಕಿಶೋರ್ ಬಾಬು, ವಿದ್ಯಾ, ರಾಕೇಶ್, ಉದಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »