TOP STORIES:

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದಿಂದ 30ನೇ ಸೇವಾ ಯೋಜನೆ


ಉದಯ ಪೂಜಾರಿ ಬಳ್ಳಾಲ್ ಭಾಗ್ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ) ಮಂಗಳೂರು ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ ದ 30ನೇ ಸೇವಾ ಯೋಜನೆ ಯನ್ನು ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ಸುರೇಶ್ ಮೈರಳಿಕೆ ಇವರ ಮನೆಗೆ ನೀಡಲಾಯಿತು.

ಸುರೇಶ್ (44ವರ್ಷ) ಇವರು ಆಟೋ ಚಾಲಕರಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿರುವ ಬಡತನದ ಕುಟುಂಬ. ಇತ್ತೀಚಿಗೆ ಸುರೇಶ್ ರವರಿಗೆ ಮೆದುಳಿನ ರಕ್ತ ಸ್ರಾವ
ಸಂಭವಿಸಿದ್ದು, ಕೊರೊನಾ ಮಹಾಮಾರಿಯ ಲಾಕ್ ಡೌನ್ ನಿಂದ ತತ್ತರಿಸಿರುವ ಈ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಯೂ ಸುರೇಶ್ ಇವರ ಕುಟುಂಬಕ್ಕೆ ದೊಡ್ಡ ಹೊಡೆತವಾಗಿದೆ.ಸುರೇಶ್ ಇವರ ಕುಟುಂಬವೂ ಸಹೃದಯಿ ದಾನಿಗಳ ನೀರಿಕ್ಷೆಯಲ್ಲಿರುವುದನ್ನು ಮನಗಂಡ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವು ತುರ್ತಾಗಿ
ಬ್ರಹ್ಮಶ್ರೀ ಸೇವಾ ನಿಧಿಯಿಂದ 30ನೇ ಯೋಜನೆಯಾಗಿ ₹10,000/- ದ ಚೆಕ್ ನ್ನು ಸ್ಥಳೀಯರಾದ ಶ್ರೀಮತಿ ಪದ್ಮರವೀಂದ್ರ ಪೂಜಾರಿ ಇವರ ಮುಖಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರ್ಷ ಕೋಟ್ಯಾನ್, ಸಂಚಾಲಕರಾದ ವಿನಯ್ ಗುರಿಪಲ್ಲ,ಉಪಸ್ಥಿತರಿದ್ದರು. ಹಾಗೂ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ದ 31ನೇ ಸೇವಾ ಯೋಜನೆಯಾಗಿ‌ ಕೊರೊನಾದ ಎರಡನೇ ಅಲೆಯಲ್ಲಿ ಕಷ್ಟದಲ್ಲಿರುವ ಆಯ್ದ ಮನೆಗಳಿಗೆ ಪುಂಜಾಲಕಟ್ಟೆ,ಕಿಲ್ಲೂರು, ಉಜಿರೆ,ಪರಿಸರದ ಮನೆಗಳಿಗೆ ತೆರಳಿ ಅಗತ್ಯವಿರುವ ‌ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.
ಸಂಚಾಲಕರಾದ ಮಧುಕರ್ ಪುಂಜಾಲಕಟ್ಟೆ,ಪ್ರಸಾದ್ ಕಿಲ್ಲೂರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »