TOP STORIES:

ಬಿಲ್ಲವರ ಹಾದಿ ತಪ್ಪಿಸುತ್ತಿರುವ ಸರ್ಕಾರ : ಪದ್ಮರಾಜ್ ಆರ್


ಮಂಗಳೂರು : ಸರ್ಕಾರ ಸ್ಥಾಪಿಸಿದ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ಬಿಲ್ಲವ ಸಮಾಜ ವಿರೋಧ ವ್ಯಕ್ತಪಡಿಸಿಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವೇ ಬೇಕು ಎಂದು ಆಗ್ರಹಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆಸರ್ಕಾರ ಈಡಿಗ ಸಮುದಾಯದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷಪದ್ಮರಾಜ ಆರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ .5ರಂದು ಸಚಿವ ಸುನೀಲ್‌ಕುಮಾರ್ ನೇತೃತ್ವದಲ್ಲಿ ಬಿಲ್ಲವರ ನಿಯೋಗ ಕೋಶದ ಬದಲು ನಿಗಮ ಸ್ಥಾಪನೆ ಮಾಡಬೇಕುಎಂದು ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿತ್ತು. ಸಂದರ್ಭ ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ ವಿರೋಧ ಇರುವುದುಸರ್ಕಾರಕ್ಕೆ ಮನವರಿಕೆಯಾಗಿದ್ದು, ಕೋಶವನ್ನು ಹಿಂಪಡೆದು ಅಭಿವೃದ್ಧಿ ನಿಗಮವನ್ನಾಗಿ ಪರಿವರ್ತಿಸುವುದಾಗಿ ಭರವಸೆಯನ್ನೂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದರು. ಆದರೆ .6ರಂದು ನಾರಾಯಣಗುರು ಅಭಿವೃದ್ಧಿ ಕೋಶಕ್ಕೆ  10 ಕೋಟಿ ರೂ. ಬಿಡುಗಡೆಗೊಳಿಸಿ ಆದೇಶ ಹೊರಡಿಸುವ ಮೂಲಕ ಸಮಾಜದ ದಾರಿ ತಪ್ಪಿಸುವ ಕಾರ್ಯ ನಡೆಸಿದೆ. ಬಿಲ್ಲವ ಈಡಿಗ ನಿಗಮದ ಬಗ್ಗೆತಮ್ಮ ನಿಲುವು ಏನು ಎಂಬುದನ್ನು ಕೂಡಲೇ ಸರ್ಕಾರ ಸ್ಪಷ್ಟಪಡಿಸಲಿ. ಯಾಕೆ ಪದೇ ಪದೇ ಗೊಂದಲ ಸೃಷ್ಟಿಸುತ್ತೀರಿ.

ಸುಮಾರು 26 ಪಂಗಡಗಳನ್ನು ಒಳಗೊಂಡ ಬಿಲ್ಲವ ಈಡಿಗ ನಾಮಧಾರಿ ಸಮಾಜಕ್ಕೆ ಪತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಹಿಂದಿನಿಂದಲೂ ಆಗ್ರಹಿಸುತ್ತಾ ಬರಲಾಗಿತ್ತು. ಆದರೆ ಬೇರೆ ಬೇರೆ ಕಾರಣ ಹೇಳಿ ಸರ್ಕಾರ ನಿಗಮ ಸ್ಥಾಪನೆಯನ್ನುಮುಂದೂಡುತ್ತಲೇ ಬರುತ್ತಿತ್ತು. ಇದರ ಮಧ್ಯದಲ್ಲಿ ಬಿಲ್ಲವ ಅಭಿವೃದ್ಧಿ ಕೋಶ ಸ್ಥಾಪನೆ ಮಾಡಿ ಆದೇಶ ಹೊರಡಿಸಿತ್ತು. ಜೀವವಿಲ್ಲದಕೋಶ ಮತ್ತು ನಿಗಮಕ್ಕೆ ಅಜಗಜಾಂತರ ವ್ಯತ್ಯಾಸ ಇರುವುದರಿಂದ ಅಂದೇ ಕೋಶಕ್ಕೆ ಸಮಾಜ ವಿರೋಧ ವ್ಯಕ್ತಪಡಿಸಿತ್ತು.

ಕೋಶ ದೊಡ್ಡ ಮೋಸ. ಇದರಲ್ಲಿ ಏನು ಕೂಡ ಇಲ್ಲ. ಬಿಲ್ಲವ ಈಡಿಗರ ಅಭಿವೃದ್ಧಿಗೆ ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಸ್ಥಾಪಿಸಿ ಇದಕ್ಕೆ 5೦೦ ಕೋಟಿ ಮೀಸಲಿಡಿ ಎಂಬ ಸಮಾಜದ ಬೇಡಿಕೆಗೆ ಸ್ಪಂದಿಸುವ ಬದಲು ಬಿಲ್ಲವ ಸಮಾಜದಲ್ಲಿ ಒಡಕುಉಂಟುಮಾಡುವ ರಾಜಕೀಯ ಕಾರ್ಯತಂತ್ರದ ಭಾಗವಾಗಿ ಕಳೆದ .5ರಂದು ಆಯ್ದ ಕೆಲವರನ್ನು ಬೆಂಗಳೂರಿಗೆ ಕರೆಸಿ ಬ್ರಹ್ಮಶ್ರೀನಾರಾಯಣಗುರು ನಿಗಮ ಘೋಷಣೆ ಇದೆ ಎಂದು ಹೇಳಿ ದಾರಿ ತಪ್ಪಿಸಲಾಗಿತ್ತು. ಕೆಲವರು ಸಂಭ್ರಮ ಪಟ್ಟು ಬ್ರಹ್ಮಶ್ರೀನಾರಾಯಣಗುರು ನಿಗಮ ಆಯಿತು ಎಂಬ ರಾಜಕಾರಣಿಗಳ ಪೊಳ್ಳು ಭರವಸೆಗೆ ಅಭಿನಂದನೆಯನ್ನೂ ಸಲ್ಲಿಸಿಯಾಗಿತ್ತು.

ಇದೀಗ ಅದರ ಬೆನ್ನಲ್ಲೇ .6ರಂದು ಸರ್ಕಾರ ಬಿಲ್ಲವ ಅಭಿವೃದ್ಧಿ ಕೋಶಕ್ಕೆ 10 ಕೋಟಿ ರೂಪಾಯಿ ಬಿಡುಗಡೆ ಮಾಡಿ ಸರ್ಕಾರ ಅಧೀನಕಾರ್ಯದರ್ಶಿ ಆದೇಶಿಸಿದ್ದಾರೆ. ಇದರ ಅರ್ಥ ಏನು? ಅನಗತ್ಯ ಗೊಂದಲ ಸೃಷ್ಟಿಸುವುದರ ಉದ್ದೇಶವಾದರೂ ಏನುಆದ್ದರಿಂದಸರ್ಕಾರಕ್ಕೆ ನಿಗಮ ಸ್ಥಾಪನೆ ಮಾಡಲು ಸಾಧ್ಯ ಇಲ್ಲದಿದ್ದರೆ ಇಲ್ಲ ಎಂದು ನೇರವಾಗಿ ತಿಳಿಸಲಿ. ಅದು ಬಿಟ್ಟು ಬೋಗಸ್ ಭರವಸೆನೀಡುತ್ತಾ ಬರುತ್ತಿರುವುದು ಖಂಡನಾರ್ಹ.

ಮಾತ್ರವಲ್ಲದೆ ಸರ್ಕಾರದ ನಿಲುವು ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದೆ ಅಭಿನಂದನೆ ಸಲ್ಲಿಸಿರುವುದೂ ಕೂಡ ಖೇದಕರ. ನಾಯಕರುಎನಿಸಿಕೊಂಡವರನ್ನು ಸಮಾಜ ಅನುಸರಿಸಿಕೊಂಡು ಹೋಗುತ್ತದೆ. ಅವರ ಮೇಲೆ ಅತಿಯಾದ ವಿಶ್ವಾಸವನ್ನು ಇಟ್ಟುಕೊಂಡಿರುತ್ತಾರೆ. ಆದ್ದರಿಂದ ಯಾವುದೇ ಸ್ಪಷ್ಟತೆ ಇಲ್ಲದೆ ಗಡಿಬಿಡಿಯಲ್ಲಿ ಸರ್ಕಾರದ ನಿಲುವನ್ನು ಸ್ವಾಗತಿಸಿ ದ್ವಂದ್ವ ನಿಲುವು ಪ್ರಕಟಿಸಿದರೆ ಸಮಾಜದದಾರಿ ತಪ್ಪಿದಂತೆಯೂ ಆಗುತ್ತದೆ. ಹಿಂದೆ ಸಮಾಜ ನಡೆಸಿದ ಹೋರಾಟಕ್ಕೂ ಯಾವುದೇ ಮಾನ್ಯತೆ ಇಲ್ಲದಂತಾಗುತ್ತದೆ ಎಂದುಪದ್ಮರಾಜ್ ಆಕ್ರೋಶ ವ್ಯಕ್ತಪಡಿಸಿದರು.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »