TOP STORIES:

ಬಿಲ್ಲವಾಸ್ ದುಬೈ ಕೂಟದ ಮಾಜಿ ಅಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ…


ಸಮಾಜ ಸೇವಕರು, ಕೊಡುಗೈ ಧಾನಿಗಳೂ, ಬಿಲ್ಲವಾಸ್ ದುಬೈ ಮಾಜಿ ಅಧ್ಯಕ್ಷರು, ಗೆಜ್ಜೆಗಿರಿ ಕ್ಷೇತ್ರದ ಪೋಷಕರೂ ಆದಶ್ರೀಯುತ ಸತೀಶ್ ಪೂಜಾರಿ ಬೆಳಪು, ದುಬೈ ಅವರು ಇಂದು ಕುಟುಂಬಸಮೇತರಾಗಿ ಶ್ರೀ  ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದಶಕ್ತಿಗಳ ದರ್ಶನ ಪಡೆದು ಅನ್ನ ಪ್ರಸಾದವನ್ನು ಸ್ವೀಕರಿಸಿದರು.ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀಯುತರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.

ನಂತರ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ ನೂತನ ಯಕ್ಷಗಾನ ಮೇಳದಕರಪತ್ರವನ್ನು ಕ್ಷೇತ್ರಾಡಳಿತ ಸಮಿತಿಯ ಪದಾಧಿಕಾರಿಗಳು ಶ್ರೀಯುತರಿಗೆ ಹಸ್ತಾಂತರಿಸಿದರು.

ಕ್ಷೇತ್ರದ ಭಕ್ತಿಯ ಶ್ರದ್ಧಾ ಕೇಂದ್ರ ನಿರ್ಮಾಣದ ಬಗ್ಗೆ ಹಾಗು ಕ್ಷೇತ್ರದಲ್ಲಿ ಮುಂದೆ ನಡೆಯಲಿರುವ ಅಭಿವೃದ್ಧಿಯ ಕೆಲಸ ಕಾರ್ಯಗಳುಮತ್ತು ಕ್ಷೇತ್ರದ ನೂತನ ಯಕ್ಷಗಾನ ಮೇಳದ ಬಗ್ಗೆ, ಕ್ಷೇತ್ರವನ್ನು ಸಂದರ್ಶಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಕ್ಷೇತ್ರದ ಸಾನಿಧ್ಯ ಶಕ್ತಿಗಳ ಕಾರಣೀಕದ ಮಹತ್ವವನ್ನು ತಾನು ಕೊಂಡಾಡಿ ಭಕ್ತಿ ಪರಮಷರಾಗಿ ಕ್ಷೇತ್ರದ ಮುಂದಿನ ಅಭಿವೃದ್ಧಿ ಕೆಲಸಕಾರ್ಯಗಳಿಗೆ ತನ್ನನ್ನು ತಾನು ಸಂಪೂರ್ಣವಾಗಿ ತೊಡಗಿಸಿಕೊಂಡು ತನ್ನವರನ್ನು ಪ್ರೇರೇಪಿಸುವುದರ ಜೊತೆಗೆ ಇದು ಸಮಾಜದಒಂದು ಪ್ರಬಲ ಶಕ್ತಿ ಕೇಂದ್ರವಾಗಬೇಕು ಎಂದು ಇಂಗಿತ ವ್ಯಕ್ತಪಡಿಸಿದ ಶ್ರೀಯುತರು ಎಲ್ಲರನ್ನು ಒಗ್ಗೂಡಿಸುವ ಭರವಸೆಯನ್ನುನೀಡಿದರು.

ಶ್ರೀ ಗೆಜ್ಜೆಗಿರಿ ನೂತನ ಯಕ್ಷಗಾನ ಮೇಳದ ರಂಗಸ್ಥಳದ ವೆಚ್ಚವನ್ನು ಮಾತೆಯ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದರು. ದುಬೈಯ ತಮ್ಮ ಮಿತ್ರರು ಮತ್ತು ಸಮಾಜ ಭಾಂಧವರನ್ನು ಪ್ರೇರೇಪಿಸಿ ಇನ್ನಷ್ಟು ಹೆಚ್ಚಿನ ಮೊತ್ತವನ್ನು ಗೆಜ್ಜೆಗಿರಿಯ ನೂತನ ಯಕ್ಷಗಾನಮೇಳಕ್ಕೆ ಮತ್ತು ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕರಿಸುವುದಾಗಿ ಭರವಸೆಯನ್ನು ನೀಡಿದರು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಬಿಲ್ಲವಾಸ್ ದುಬೈ ಕೂಟದ ವತಿಯಿಂದ ದೊಡ್ಡ ಮೊತ್ತವನ್ನು ಸೇವಾರೂಪದಲ್ಲಿ ನೀಡಿ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳುನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಶ್ರೀ ದೇಯಿಬೈದೆತಿ ಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »