TOP STORIES:

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ


ಹಿಂದುಳಿದವರು ರಾಜಕೀಯವಾಗಿ ಪ್ರಬಲವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಶಯ

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ

ಬೆಂಗಳೂರು: ಇಲ್ಲಿನ ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಸುಲಭವಾಗಿಮೇಲೆ ಬರಲು ಸಾಧ್ಯವಿಲ್ಲ. ರಾಜಕೀಯವಾಗಿ ಪ್ರಬಲರಾದರೆ ಮಾತ್ರ ಸಾಧ್ಯ ಎಂದರು.

ಎಲ್ಲರಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಬೆಳೆಸಬೇಕು. ಇಂತಹ ಪ್ರತಿಭೆಗಳನ್ನು ಗುರುತಿಸುವಲ್ಲಿ ಬೆಂಗಳೂರುಬಿಲ್ಲವ ಅಸೋಸಿಯೇಶನ್ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಅಸೋಸಿಯೇಶನ್ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ, ಈಗಾಗಲೇ ಬಿಲ್ಲವ ಹುಡುಗರಿಗೆ ಉಚಿತ ವಿದ್ಯಾರ್ಥಿನಿಲಯ ಇದ್ದು, ಹುಡುಗಿಯರಿಗೆ ಹಾಸ್ಟೆಲ್ ಪ್ರಾರಂಭಿಸಿರುವ ಯೋಜನೆ ಇದೆ ಎಂದರು.

ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ. ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್ ವಕೀಲ ತಾರಾನಾಥ ಪೂಜಾರಿ, ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ.ಬಂಗೇರ ಅವರನ್ನು ಗೌರವಿಸಲಾಯಿತು.

ಅಸೋಸಿಯೇಶನ್ ಗೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್, ಕೋಶಾಧಿಕಾರಿವಿ.ಗೋಪಾಲ್, ಸಂಘಟನಾ ಕಾರ್ಯದರ್ಶಿ ಜೆ.ನಾರಾಯಣ ಪೂಜಾರಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಜಾ ಜಯರಾಂ, ಸಹ ಅಧ್ಯಕ್ಷೆಜಯಂತಿ ವಿಜಯಕೃಷ್ಣ ಉಪಸ್ಥಿತರಿದ್ದರು. ಸಂಪತ್ ಕುಮಾರ್ ಡಿ.ಎಸ್, ದೇವಿಪ್ರಸಾದ್, ಸುಪ್ರಿಯಾ ಮಧುಸೂದನ್‌ಕಾರ್ಯಕ್ರಮನಿರೂಪಿಸಿದರು. ವಿದ್ಯಾ ಕೆ.ಟಿ.ಪೂಜಾರಿ ಪ್ರಾರ್ಥಿಸಿದರು. ಸದಸ್ಯರು ಹಾಗು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪೋಟೋ—–

ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವ ಹಬ್ಬವನ್ನು ಭಾನುವಾರ ವಿಧಾನ ಪರಿಷತ್ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿದರು. ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ., ಅಸೋಸಿಯೇಶನ್ ಅಧ್ಯಕ್ಷಎಂ.ವೇದಕುಮಾರ್, ೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್ಮೊದಲಾದವರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »