TOP STORIES:

ಬಿಲ್ಲವ ಸಭೆ-ಸಮಾರಂಭಗಳಿಗೆ ಜಗದೀಶ್ ಅಧಿಕಾರಿಗೆ ಆಹ್ವಾನವಿಲ್ಲ: ಮೂಲ್ಕಿ ಬಿಲ್ಲವ ಸಂಘ ನಿರ್ಧಾರ…!


ಮೂಲ್ಕಿ:
ಬಿಲ್ಲವ ಆರಾಧ್ಯ ಶಕ್ತಿಗಳಾದ ಕೋಟಿ ಚೆನ್ನಯ್ಯ ಹಾಗೂ ಬಿಲ್ಲವ ಸಮುದಾಯದ ನಾಯಕರುಗಳ ಬಗ್ಗೆ ತುಚ್ಚವಾಗಿ ನಿಂದಿಸಿರುವ ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿಯನ್ನು ಪ್ರತಿಯೊಬ್ಬ ಬಿಲ್ಲವ ಸಮುದಾಯದವರು ಹಾಗೂ ಬಿಲ್ಲವ ಸಂಘಟನೆಗಳು ಯಾವುದೇ ವೈಯಕ್ತಿಕ ಹಾಗೂ ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಇನ್ನು ಮುಂದೆ ಆಹ್ವಾನ ನೀಡದಿರಲು ನಿರ್ಧರಿಸಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.

ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಭಾನುವಾರ ಸಂಘದ ಅಧ್ಯಕ್ಷರಾದ ರಮೇಶ್ ಅಮೀನ್ ಕೊಕ್ಕರ್‌ಕಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಂಡಿದೆ.
ಬಿಲ್ಲವ ಸಮುದಾಯ ಸಹಿತ ತುಳುನಾಡಿನ ಸರ್ವಧರ್ಮದವರು ಸಹ ಆರಾಧ್ಯ ದೈವ-ದೇವರುಗಳಾಗಿ ನಂಬಿಕೊಂಡು ಬಂದಿರುವ ಕೋಟಿ ಚೆನ್ನಯ್ಯ ಅವಳಿ ವೀರರಿಗೆ ಸಮಸ್ತ ಜನರು ಗರಡಿಯ ಇನ್ನಿತರ ದೈವ ಸಾನ್ನಿಧ್ಯದ ಮೂಲಕ ವಿಶೇಷ ಸ್ಥಾನಮಾನವನ್ನು ನೀಡಿರುವುದನ್ನು ತನ್ನ ಹೀನ ಬುದ್ದಿಯಿಂದ ಜಗದೀಶ್ ಅಧಿಕಾರಿ ಸಾರ್ವಜನಿಕವಾಗಿ ಹೇಳಿರುವುದರ ಬಗ್ಗೆ ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಅವರ ಮನಸ್ಥಿತಿಯನ್ನು ಅರಿತು ಅವರು ಕೇಳಿರುವ ಕ್ಷಮೆಯು ಆಧಾರ ರಹಿತವಾಗಿ ಕೇವಲ ಕಾಲ್ಪನಿಕವಾಗಿದೆ. ಮನಸ್ಸಿನಲ್ಲಿ ದುಷ್ಟ ಬುದ್ದಿಯನ್ನಿಟ್ಟುಕೊಂಡು ಯಾರದೋ ಒತ್ತಡಕ್ಕೆ ಮಣಿದು ಕ್ಷಮೆ ಕೇಳಿದ್ದರೂ ಸಹ ಬಿಲ್ಲವ ಸಮಾಜ ಅವರನ್ನು ಕ್ಷಮಿಸೋಲ್ಲ ಎಂದು ನಿರ್ಧರಿಸಲಾಗಿದೆ.

ಸಭೆಯಲ್ಲಿ ನಿರ್ಧರಿಸಿದಂತೆ ಜಗದೀಶ್ ಅಧಿಕಾರಿಯನ್ನು ಮೂಲ್ಕಿಯ ಬಿಲ್ಲವ ಸಮಾಜದವರು ತಮ್ಮ ವೈಯಕ್ತಿಕ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಬಾರದು ಎಂಬ ನಿರ್ಣಯಕ್ಕೆ ಗೌರವ ನೀಡಬೇಕು, ಇಂತಹ ಸಮಾಜ ವಿಘಟನೆ ಮಾಡುವ ವ್ಯಕ್ತಿಗಳಾಗಲಿ, ಶಕ್ತಿಗಳು ಬಿಲ್ಲವ ಸಮಾಜವನ್ನು ಒಡೆದು ಆಳುವ ನೀತಿಯ ವಿರುದ್ಧವಾಗಿ ಈ ಮಹತ್ವದ ನಿರ್ಧಾರವಾಗಿದೆ. ವಿಶ್ವದಲ್ಲಿರುವ ಎಲ್ಲಾ ಬಿಲ್ಲವ ಸಂಘಟನೆಗಳು ಸಹ ಜಗದೀಶ್ ಅಧಿಕಾರಿಯನ್ನು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆಹ್ವಾನಿಸದೇ ತಿರಸ್ಕರಿಸಬೇಕು ಎಂದು ಬಿಲ್ಲವ ಸಂಘಗಳ ಒಕ್ಕೂಟವಾದ ರಾಷ್ಟ್ರೀಯ ಬಿಲ್ಲವರ ಮಹಾಮಂಡಲಕ್ಕೆ ಮನವಿ ಮಾಡುವುದು ಎಂದು ನಿರ್ಣಯಿಸಿಕೊಂಡು,
ರಾಜಕೀಯವಾಗಿ ಇಂತಹ ವ್ಯಕ್ತಿಗಳು ಸಮಾಜದಲ್ಲಿ ತಪ್ಪು ಸಂದೇಶವನ್ನು ನೀಡುವ ಹಾಗೂ ತನ್ನ ಬೇಜವಬ್ದಾರಿಯ ಉದ್ಧಟತನ ತೋರಿರುವುದರಿಂದ ಇವರನ್ನು ಕೂಡಲೆ ರಾಜಕೀಯ ಪಕ್ಷದಿಂದ ಶಾಶ್ವತವಾಗಿ ನಿವೃತ್ತಿಗೊಳಿಸಬೇಕು ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹಾಗೂ ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರಲ್ಲಿ ಮನವಿ ಮಾಡಿ ಹಕ್ಕೊತ್ತಾಯ ನಡೆಸುವುದೆಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷರುಗಳಾದ ರಾಘು ಸುವರ್ಣ ಕೊಳಚಿಕಂಬಳ, ಯದೀಶ್ ಅಮೀನ್ ಕೊಕ್ಕರ್‌ಕಲ್, ಡಾ.ಹರಿಶ್ಚಂದ್ರ ಪಿ. ಸಾಲಿಯಾನ್, ಮೂಲ್ಕಿ ನಗರ ಪಂಚಾಯತ್‌ನ ಉಪಾಧ್ಯಕ್ಷ ಸತೀಶ್ ಅಂಚನ್ ಬಾಳೆಹಿತ್ಲು, ಬಿರುವೆರ್ ಕುಡ್ಲದ ಮೂಲ್ಕಿ ಘಟಕದ ಅಧ್ಯಕ್ಷ ಕಿಶೋರ್ ಸಾಲ್ಯಾನ್, ಶ್ರೀ ನಾರಾಯಣಗುರು ಸೇವಾದಳದ ಪರವಾಗಿ ಉಮೇಶ್ ಮಾನಂಪಾಡಿ, ಶ್ರೀ ನಾರಾಯಣಗುರು ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಸರೋಜಿನಿ ಸುವರ್ಣ, ಸಾಮಾಜಿಕ ಚಿಂತಕ ದಿನೇಶ್ ಬಪ್ಪನಾಡು ಮತ್ತಿತರ ಸಂಘದ ಸದಸ್ಯರು ಮಾತನಾಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಕಮಲಾಕ್ಷ ಬಡುಗುಹಿತ್ಲು ನಿರ್ಣಯವನ್ನು ಮಂಡಿಸಿ, ಕಾರ್ಯಕ್ರಮ ನಿರೂಪಿಸಿದರು.

“ಇಂತಹ ನಿರ್ಣಯ ಪ್ರತೀ ಬಿಲ್ಲವ ಸಂಘದಲ್ಲಿ ನಡೆಯಲಿ ಎಂಬ ಆಶಯ ನಮ್ಮದು…. ಇದು ಬಿಲ್ಲವರ ಸ್ವಾಭಿಮಾನದ ಪ್ರಶ್ನೆ” ….-ರಮೇಶ್ ಅಮೀನ್
ಅಧ್ಯಕ್ಷರು
ಬಿಲ್ಲವ ಸಮಾಜ ಸೇವಾ ಸಂಘ ( ರಿ) ಮೂಲ್ಕಿ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »