TOP STORIES:

ಬೆಂಗಳೂರಿನಲ್ಲಿ ಮೋದಿ ಪಕ್ಕದಲ್ಲಿ ನಿಂತು ಮಿಂಚಿದ ರೀಣಾ ರಘು ಸುವರ್ಣ


 

 

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. ಸದ್ಯ ಜೆಸಿ ನಗರದ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೀನಾ ಸುವರ್ಣ 2014 ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಪ್ರೊಬೇಷನರಿ ಅವಧಿಯಲ್ಲಿಯೇ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದ ರೀನಾ ರಘು ಸುವರ್ಣಾ ಅವರು ಇದೀಗ ಪ್ರಧಾನಿ ಪಕ್ಕದಲ್ಲೇ ನಿಂತು ಭದ್ರತೆ ಒದಗಿಸಿ ಭಾರೀ ಸುದ್ದಿಯಾಗಿದ್ದಾರೆ.

ಸೋಮವಾರ ಬಳಗ್ಗೆ ಮಲ್ಲೇಶ್ವರಂ ಬಳಿ ಇರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಗಲ್ಲು ಹಾಕುವ ಕಾರ್ಯಕ್ರಮವಿತ್ತು. ಈ ವೇಳೆ ಪ್ರಧಾನಿ ಅಕ್ಕ ಪಕ್ಕ ಇದ್ದಿದ್ದು ಎನ್‌ಎಸ್ ಜಿ ಪಡೆ. ರಾಜ್ಯದಿಂದಲೂ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ, ಮೋದಿ ಅವರಿಂದ ಕೇವಲ ಎರಡು ಮೀಟರ್ ಅಂತರದಲ್ಲಿ ನಿಂತು ಗಮನ ಸೆಳೆದಿದ್ದು ಎಸಿಪಿ ರೀನಾ ಸುವರ್ಣಾ. ಪ್ರಧಾನಿಗಳಿಗೆ ಸಮೀಪ ಹೋಗಿ ಭದ್ರತೆ ಒದಗಿಸಿದ ಅವಕಾಶ ರೀನಾ ಅವರಿಗೆ ಸಿಕ್ಕಿದ್ದು ಇದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ.

ಯಾರು ಈ ರೀನಾ ರಘು ಸುವರ್ಣ: 2014 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ವ್ಯಾಸಂಗದ ಅವಧಿಯಲ್ಲಿ ಬೆಂಗಳೂರು ವಿವಿಯಲ್ಲಿ ಚಿನ್ನದ ಪದಕ ಗಿಟ್ಟಿಸಿದ್ದ ರೀನಾ ಸುವರ್ಣ ಅವರು, ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ಪ್ರೊಬೆಷನರಿ ಅವಧಿಯಲ್ಲಿಯೇ ನಾನಾ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವ ಮೂಲಕ ಬೆಂಗಳೂರಿನಲ್ಲಿ ಸದ್ದು ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಡಿವೈಎಸ್ಪಿಯಾಗಿ ಸೇವೆ:

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ರೀನಾ ಸುವರ್ಣ ಅವರು ಸುಮಾರು ಹನ್ನೊಂದು ಮಿಸ್ಸಿಂಗ್ ಪ್ರಕರಣ ಪತ್ತೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ಒಂದು ದಿನದಲ್ಲಿ ಪತ್ತೆ ಮಾಡುವ ಮೂಲಕ ರೀನಾ ಅವರ ತನಿಖಾ ಶೈಲಿ ಅಧಿಕಾರಿಗಳ ಗಮನ ಸೆಳೆಯಿತು. ಜಿಗಣಿ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗದೇ ಉಳಿದಿದ್ದ ಅಪರಿಚಿತ ಶವ ಪ್ರಕರಣವನ್ನು ಬೇಧಿಸಿದ್ದರು. ಹೀಗೆ ಅಪರಾಧ ಪ್ರಕರಣಗಳನ್ನು ಕ್ಷಾಣಾಕ್ಷತೆಯಿಂದ ಪತ್ತೆ ಮಾಡುವ ಮೂಲಕ ರೀನಾ ಸುವರ್ಣ ಬೆಂಗಳೂರಿನಲ್ಲಿ ಸುದ್ದಿಯಾಗಿದ್ದಾರೆ.

 

ಮಾದಕ ಜಾಲದ ವಿರುದ್ಧ ಕಾರ್ಯಾಚರಣೆ:

ಇನ್ನು ಡ್ರಗ್ ಮಾಫಿಯಾ ವಿರುದ್ಧ ರೀನಾ ಸುವರ್ಣ ನಡೆಸಿರುವ ಕಾರ್ಯಾಚರಣೆ ಬಾರೀ ಸದ್ದು ಮಾಡಿದೆ. ಮೂವರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳ ಎಡೆಮುರಿ ಕಟ್ಟುವಲ್ಲಿ ಎಸಿಪಿ ರೀನಾ ಸುವರ್ಣ ಯಶಸ್ವಿಯಾಗಿದ್ದರು. ಹಲವು ಮಾಫಿಯಾಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಮಹತ್ವದ ಪ್ರಕರಣ ಪತ್ತೆ ಮಾಡುವಲ್ಲಿ ರೀನಾ ಅವರು ಖ್ಯಾತಿಯಾಗಿದ್ದಾರೆ.

ಕೊರೊನಾ ವಾರಿಯರ್:

ಇನ್ನು ಕೊರೊನಾ ಕಾಲದಲ್ಲಿ ತಮ್ಮ ಮನೆ ಸ್ವಚ್ಛತೆ ಜತೆಗೆ ಕೆಲಸ ಮಾಡುವ ಪೊಲೀಸ್ ಠಾಣೆಗಳು ಸ್ವಚ್ಛವಾಗಿಟ್ಟುಕೊಳ್ಳುವ ಅಭಿಯಾನ ಶುರು ಮಾಡಿ ಯಶಸ್ವಿಯಾಗಿದ್ದರು. ಪೊಲೀಸ್ ಠಾಣೆಗಳನ್ನು ಕ್ಲೀನ್ ಮಾಡಿದ್ದರು. ಕೊರೊನಾ ಕಾಲದಲ್ಲಿ ಪೊಲೀಸರಿಗೆ ಯೋಗ ಪರಿಚಯಿಸಿದ್ದರು. ಕೊರೊನಾ ವಾರಿಯರ್ ಆಗಿ ಹೆಸರು ಮಾಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಸಮೀಪ ನಿಂತು ಭದ್ರತೆ ಒದಗಿಸುವ ಮೂಲಕ ಸುದ್ದಿಯಾಗಿದ್ದಾರೆ

 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »