TOP STORIES:

ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ಶವ , ಮೃತದೇಹಕ್ಕೆ ಹೆಗಲುಕೊಟ್ಟ ಪಿಎಸೈ ಪುತ್ತೂರಿನ ಪ್ರದೀಪ್ ಪೂಜಾರಿ


ಪುತ್ತೂರು : ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಬೆಟ್ಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಹೆಗಲುಕೊಟ್ಟು ಬೆಟ್ಟದಲ್ಲಿ ಇಳಿಸುವ ಮೂಲಕ ಪಿಎಸೈ ಪ್ರದೀಪ್ ಪೂಜಾರಿ ಹಾಗೂ ಸಿಬಂದಿಗಳು ,ಸೈನಿಕರು ಮಾನವೀಯತೆ ಮೆರೆದಿದ್ದಾರೆ.

ಜಾಲಾರಿ ದೇವಾಲಯದ ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವಕಾಣಿಸಿದೆ. ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ ಗಮನಕ್ಕೆ ಸೈನಿಕರು ತಂದಿದ್ದಾರೆ.

ಸ್ಥಳಕ್ಕೆ ತೆರಳಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸೈ ಹಾಗೂ ಸಿಬ್ಬಂದಿಗಳು,ಸೈನಿಕರು ಮೃತದೇಹ ಹೊತ್ತುಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‌ಐ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕೆಂಗುಡೇಲು ನಿವಾಸಿ ಪ್ರದೀಪ್ ಪೂಜಾರಿಹಾಗೂ ಅವರ ಸಿಬ್ಬಂದಿ ಸೇರಿದಂತೆಸೈನಿಕರು ಚಟ್ಟದ ಮಾದರಿ ತಯಾರು ಮಾಡಿ 5-6 ಕಿಲೋಮೀಟರ್ ದುರ್ಗಮ ಹಾದಿಯಲ್ಲಿಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆವ್ಯಕ್ತವಾಗಿದೆ.

ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಪ್ರದೀಪ್ ಪೂಜಾರಿ

ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿರುವ ಕೆಯ್ಯೂರಿನ ಪ್ರದೀಪ್ ಪೂಜಾರಿಯವರು 2022ನೇ ಸಾಲಿನ ಮುಖ್ಯಮಂತ್ರಿಚಿನ್ನದ ಪದಕಕ್ಕೆ ಭಾಜನರಾಗಿದ್ದರು.

2010ನೇ ಸಾಲಿನಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ಆಗಿ ಆಯ್ಕೆಗೊಂಡಿದ್ದು, ನಿವೃತ್ತ ಸರ್ವೆ ಸೂಪರ್ ವೈಸರ್ ಬಾಲಕೃಷ್ಣ ಪೂಜಾರಿಕೆಂಗುಡೇಲು ಮತ್ತು ಗುಣವತಿ ದಂಪತಿ ಪುತ್ರ.

ಪ್ರದೀಪ್ ಪೂಜಾರಿ ಅವರು ರಾಜಾನುಕುಂಟೆ, ಅವಲಹಳ್ಳಿ, ಕಮರ್ಷಿಯಲ್ ಸ್ಟ್ರೀಟ್, ಶಿಡ್ಲಘಟ್ಟ ಗ್ರಾಮಾಂತರ, ವಿಶ್ವನಾಥಪುರಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪಿ.ಎಸ್‌. ಆಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »