ಬೆಳ್ತಂಗಡಿ, ಜ 31 : ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿಯೊಬ್ಬರನ್ನು ಬೀದರ್‌ಗೆ ವರ್ಗಾವಣೆಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಮಹಿಳಾ ಅಧಿಕಾರಿಯನ್ನು ಪ್ರಸ್ತುತ ಇರುವ ಸ್ಥಳದಲ್ಲೇ ಕರ್ತವ್ಯದಲ್ಲಿಮುಂದುವರೆಯುವಂತೆ ಹಿರಿಯ ಅರಣ್ಯಾ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಸರ್ಕಾರದಿಂದ ಅಧಿಕೃತವಾದ ಯಾವುದೇಆದೇಶ ಬಂದಿಲ್ಲ ಎಂದು ತಿಳಿದು ಬಂದಿದೆ.
ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕೆಲವು ಸಂಘಟನೆಗಳೂ ಕೂಡಆಕ್ರೋಶ ವ್ಯಕ್ತಪಡಿಸಿದ್ದವು. ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡುವಂತೆಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕೆಲವುಸಂಘಟನೆಗಳೂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದವು.