TOP STORIES:

ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಯಾಕೆ ಸರ್ಕಾರಕ್ಕೆ ತಾತ್ಸಾರ ಭಾವನೆ? ಪದ್ಮರಾಜ್ ಆರ್.


ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟುತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ.  ಇದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಬ್ರಹ್ಮಶ್ರಿನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗುಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ. ಸರ್ಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಬಗ್ಗೆಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗು ಬ್ರಹ್ಮಶ್ರೀ ನಾರಾಯಣಗುರುಗಳಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರ್ಕಾರಕ್ಕೆ ಯಾಕೆ ತಾತ್ಸಾರ ಭಾವನೆ?

ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗು ಪಕ್ಷದಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕುಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ ಸ್ವಾಮಿ ಬಿಲ್ಲವ, ಈಡಿಗ ಹಾಗು ಸಮಸ್ತ ನಾರಾಯಣಗುರುಗಳಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?

ವಿರೋಧ ಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆಆಗುತ್ತಿರುವಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »