ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ನಾಡಿನ ವಿವಿಧ ಸಮಾಜ ಸುಧಾರಕರ ಕುರಿತು ಪಠ್ಯ ಪರಿಷ್ಕರಣೆಯಲ್ಲಿಆಗಿರುವ ತಪ್ಪುಗಳಿಗೆ ಸಮಾಜದ ವಿವಿಧ ವಲಯಗಳಿಂದ ಕೇಳಿಬಂದ ವಿರೋಧಗಳಿಗೆ ಸ್ಪಂದಿಸಿರುವ ಶಿಕ್ಷಣ ಇಲಾಖೆ ಎಂಟುತಿದ್ದುಪಡಿ ಮಾಡಿ ಪಠ್ಯದಲ್ಲಿ ಅಳವಡಿಸುವಂತೆ ಆದೇಶ ಹೊರಡಿಸಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಬ್ರಹ್ಮಶ್ರಿನಾರಾಯಣಗುರುಗಳ ಪಠ್ಯವನ್ನು10ನೇ ತರಗತಿಯ ಪಠ್ಯದಲ್ಲಿ ಮರುಸೇರ್ಪಡೆಗೊಳಿಸಿ ಎನ್ನುವ ಬಿಲ್ಲವ ಸಮುದಾಯ ಹಾಗುಗುರುಗಳ ಅನುಯಾಯಿಗಳ ಬೇಡಿಕೆಗೆ ಸ್ಪಂದಿಸಿಲ್ಲ. ಸರ್ಕಾರದಲ್ಲಿ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದ್ದರೂ ಈ ಬಗ್ಗೆಚಕಾರ ಎತ್ತಿಲ್ಲ. ಕರ್ನಾಟಕದಲ್ಲಿ ಬಿಲ್ಲವ, ಆರ್ಯ ಈಡಿಗ ಸೇರಿದಂತೆ 26 ಪಂಗಡಗಳ ಹಾಗು ಬ್ರಹ್ಮಶ್ರೀ ನಾರಾಯಣಗುರುಗಳಕೋಟ್ಯಂತರ ಮಂದಿ ಅನುಯಾಯಿಗಳ ಬಗ್ಗೆ ಸರ್ಕಾರಕ್ಕೆ ಯಾಕೆ ತಾತ್ಸಾರ ಭಾವನೆ?
ನಾರಾಯಣಗುರುಗಳ ಕುರಿತ ಪಠ್ಯವನ್ನು 10ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರಿಸಲಾಗಿದೆ ಎಂದು ಸರ್ಕಾರ ಹಾಗು ಪಕ್ಷದಮುಖಂಡರು ಸಮಜಾಯಿಷಿ ನೀಡುತ್ತಿದ್ದಾರೆ. ಆದರೆ ಕನ್ನಡ ಭಾಷಾ ಪಠ್ಯವನ್ನು ಶೇ.30ರಿಂದ 50ರಷ್ಟು ವಿದ್ಯಾರ್ಥಿಗಳು ಮಾತ್ರಓದುತ್ತಾರೆ. ಉಳಿದ ಭಾಷಾ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಗುರುಗಳ ಕುರಿತ ಮಾಹಿತಿಯನ್ನು ಎಲ್ಲಿ ಪಡೆಯಬೇಕುಎಂಬುದರ ಬಗ್ಗೆ ಸರ್ಕಾರ ಚಿಂತಿಸಿದೆಯೆ? ಯಾಕೆ ಸ್ವಾಮಿ ಬಿಲ್ಲವ, ಈಡಿಗ ಹಾಗು ಸಮಸ್ತ ನಾರಾಯಣಗುರುಗಳಅನುಯಾಯಿಗಳನ್ನು ಮತ್ತೆ ಮತ್ತೆ ಕಡೆಗಣಿಸುತ್ತಿದ್ದೀರಿ?
ವಿರೋಧ ಪಕ್ಷದ ಶಾಸಕರು, ಮುಖಂಡರು ಕೇವಲ ಪತ್ರಿಕಾ ಹೇಳಿಕೆ ನೀಡಿ ಸರ್ಕಾರದಿಂದ ಗುರುಗಳ ಅನುಯಾಯಿಗಳಿಗೆ ಆಗುತ್ತಿರುವಅನ್ಯಾಯದ ಬಗ್ಗೆ ಸುಮ್ಮನೆ ಕುಳಿತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪಠ್ಯವನ್ನು ಮತ್ತೆ 10ನೇ ತರಗತಿಯ ಸಮಾಜ ವಿಜ್ಞಾನಅಥವಾ ಎಲ್ಲ ಭಾಷಾ ಮಾಧ್ಯಮಕ್ಕೆ ಸೇರ್ಪಡೆಗೊಳಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳು ಓದುವಂತೆ ಮಾಡುವ ನಿರ್ಧಾರಕೈಗೊಳ್ಳಲಿ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ.
ಪದ್ಮರಾಜ್ ಆರ್.
ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ