TOP STORIES:

ಬ್ರಹ್ಮ ಶ್ರೀ ನಾರಾಯಣ ಗುರು ಸಬ್ದ ಚಿತ್ರ ನಿರಾಕರಣೆ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಣೆ


ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ನಿರಾಕರಿಸಿದ್ದನ್ನು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಖಂಡಿಸುತ್ತದೆ, ಎಂದು ಎಸ್ ಎನ್ ಜಿ ಯ ರಾಜ್ಯಾಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಆಕ್ಷೇಪ ವ್ಯಕ್ತಪಡಿಸಿದರು.

“ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ ಎಂಬ ಸಂದೇಶವನ್ನು ಸಾರಿದ ಸಂತ, ಮಾನವತಾವಾದಿ, ಸಮಾಜ ಸುಧಾರಕ, ಹಿಂದುಳಿದ ವರ್ಗಗಳ ಶೋಷಿತ ವರ್ಗಗಳ ತುಳಿತಕ್ಕೆ ಒಳಗಾದ ಸಮುದಾಯದವರನ್ನು ಮೇಲೆತ್ತಿದವರು, ಅವರ ಬದುಕಿನಲ್ಲಿ ಆಶಾಕಿರಣವನ್ನು ಮೂಡಿಸಿದವರು ಹಾಗೂ ಅಕ್ಷರ ಬ್ರಹ್ಮ ಎಂದೆ ಜನಮಾನಸದಲ್ಲಿ ಮನೆಮಾತಾಗಿರುವ, ಬ್ರಹ್ಮರ್ಷಿ ನಾರಾಯಣ ಗುರುಗಳು ಕೇರಳದ ಮೂಲಕ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ, ಸರ್ವ ಧರ್ಮಗಳ ಜನರು ಸಹ ಬಾಳ್ವೆಗಳ ಮೂಲಕ ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು, ‘ಮನುಷ್ಯ ಕುಲಂ ತಾನೊಂದೇ ವಲಂ’ ಎನ್ನುವ ಆದಿಕಪಿ ಪಂಪನ ಮಾತುಗಳನ್ನು ತಮ್ಮ ಧಾರ್ಮಿಕ ತತ್ವಾದರ್ಶಗಳ ಮೂಲಕ ನನಸು ಮಾಡಿದ ಭಾರತೀಯ ದಾರ್ಷನಿಕರಾದ ಅಂಬೇಡ್ಕರ್‌, ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧಿ, ರವೀಂದ್ರನಾಥ ಠಾಗೂರ್ ಇವರುಗಳು ಬ್ರಹ್ಮರ್ಷಿ ನಾರಾಯಣ ಗುರುಗಳ ಪ್ರಭಾವಕ್ಕೆ ಒಳಗಾಗಿ ಪ್ರೇರೆಪಣೆಯನ್ನು ಪಡೆದ ಮಹನೀಯರು, ಇಂತಹ ಮನುಕುಲದ ದಿವ್ಯ ಜ್ಯೋತಿಯೊಂದರ ಸ್ಥಬ್ದ ಚಿತ್ರವೊಂದನ್ನು ಕೇರಳದ ಸರ್ಕಾರವು ದೆಹಲಿಯಲ್ಲಿ ನಡೆಯಲಿರುವ ಜನವರಿ 26 ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಕೇರಳ ರಾಜ್ಯದ ಹೆಮ್ಮೆಯ ಪ್ರತೀಕವಾಗಿ ಕಳಿಸಿರುವುದನ್ನು ಕೇಂದ್ರ ಆಯ್ಕೆ ಸಮಿತಿ ತಿರಸ್ಕರಿಸಿರುವುದು ಅತ್ಯಂತ ನೋವಿನ ವಿಚಾರವಾಗಿದೆ, ಸ್ತ್ರೀ ಸಮಾನತೆ ಪ್ರತಿಪಾದಿಸಿ ಜಾತಿ, ಮತ ಭೇದಗಳನ್ನು ದಿಕ್ಕರಿಸಿ ಸಮಾಜೋದ್ಧಾರಕ್ಕೆ ಶ್ರಮಿಸಿದ ಮಹಾನ್ ಚೇತನ. ಅಂತವರ ಮೂರ್ತಿ ಇದ್ದ ಸ್ಥಬ್ಧ ಚಿತ್ರವನ್ನು ತಿರಸ್ಕಾರ ಮಾಡಿರುವುದು ಕ್ಷಮಾರ್ಹವಲ್ಲದ ತಪ್ಪು ಹಾಗೂ ಭಾರತೀಯ ಸುಧಾರಣಾ ಪರಂಪರೆಯ ಬಗ್ಗೆ ತಿಳುವಳಿಕೆ ಇಲ್ಲದ ಅಜ್ಞಾನದ ಪರಮಾವಧಿ, ಆಯ್ಕೆ ಸಮಿತಿಯಲ್ಲಿ ಇಂತಹ ಅಜ್ಞಾನಿಗಳಿರುವುದು ದೇಶಕ್ಕೆ ಶೋಭೆಯಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಕೆಲವು ಮೂಲಗಳ ಪ್ರಕಾರ, ಗುರುಗಳ ಶಿಲ್ಪದ ಬದಲು ಶಂಕರಾಚಾರ್ಯರ ಪ್ರತಿಮೆ ಇಡಬಹುದು ಎಂಬ ಮಾಹಿತಿ ಇದ್ದು ಅದನ್ನು ಖಂಡಿಸುತ್ತೇವೆ . ಕೇವಲ ಶಂಕರಾಚಾರ್ಯರ ಶಿಲ್ಪ ಇಡುತ್ತಿದ್ದರೆ ಆ ಬಗ್ಗೆ ಯಾವುದೇ ಆಕ್ಷೇಪ ಇರುತ್ತಿರಲಿಲ್ಲ ಎಂದರು.

ಸಮಾನತೆಯ ಸಮಾಜದ ಕನಸು ಕಾಣುವ ಪ್ರತಿಯೊಬ್ಬ ಭಾರತೀಯರು ಖಂಡಿಸಬೇಕಿದೆ. ಇದು ಹಿಂದುಳಿದ ಶೋಷಿತ ದಲಿತ ಗುರುಗಳಿಗೆ ಮತ್ತು ಸಮಾಜಕ್ಕೆ ಮಾಡಿದ ಅವಮಾನವಾಗಿದ್ದು ಬ್ರಹ್ಮರ್ಷಿ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಮೆರವಣಿಗೆಯ ಸಮಿತಿಯು ಅಂಗೀಕಾರ ಮಾಡದೇ ಗುರುಗಳಿಗೆ ಗೌರವವನ್ನು ನೀಡಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಚ್ಚುತ ಅಮೀನ್ ಕಲ್ಮಾಡಿ, ರಾಜ್ಯ ಉಪಾಧ್ಯಕ್ಷರು, ರಾಜು ಪೂಜಾರಿ ಉಳ್ಳೂರು, ಗೌರವ ಅಧ್ಯಕ್ಷರು, ಜಗನ್ನಾಥ್ ಕೋಟೆ, ಉಡುಪಿ ಜಿಲ್ಲಾ ಅಧ್ಯಕ್ಷರು, ಶಶಿಧರ ಎಮ್. ಅಮೀನ್, ವಡಭಾಂಡೇಶ್ವರ, ತಾಲೂಕು ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »