TOP STORIES:

ಮಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕೈಕೊಟ್ಟ ವಿದ್ಯುತ್‌: ವಿಮಾನಗಳ ಹಾರಾಟ ಸ್ಥಗಿತ


ತಾಂತ್ರಿಕ ಕಾರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ ಮಾಡಲಾಗಿದೆ.

ಮಂಗಳೂರು: ತಾಂತ್ರಿಕ ಕಾರಣದಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ( Mangaluru International Airport) ರನ್ ವೇನಲ್ಲಿ ವಿದ್ಯುತ್ ಕೈ ಕೊಟ್ಟಿದ್ದು, ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಡೈವರ್ಟ್ಮಾಡಲಾಗಿದೆ. ಪವರ್ ಸಪ್ಲೇ ಸಮಸ್ಯೆಯಿಂದ ರನ್ ವೇನಲ್ಲಿ ಕತ್ತಲು ಆವರಿಸಿದೆ. ಮುಂಬೈನಿಂದ ಆಗಮಿಸಿದ ವಿಮಾನ ಎಟಿಸಿಸೂಚನೆ ಹಿನ್ನೆಲೆ ಲ್ಯಾಂಡ್ ಆಗದೇ ಕೇರಳದ ಕಣ್ಣೂರಿಗೆ ವಾಪಾಸ್ ತೆರಳಿದೆ. ತಾಂತ್ರಿಕ ಸಮಸ್ಯೆ ಸರಿಪಡಿಸುವವರೆಗೆ ಮಂಗಳೂರಿಗೆಬರುವ ಮತ್ತು ಹೋಗುವ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ವಿದ್ಯುತ್‌ ಪೂರೈಕೆ ಸಮಸ್ಯೆಯನ್ನು ಏರ್‌ಪೋರ್ಟ್ ಸಿಬ್ಬಂದಿಗಳು ಸರಿಪಡಿಸುತ್ತಿದ್ದು, ಬಹರೈನ್‌ಗೆ ತೆರಳಬೇಕಿದ್ದ ಏರ್‌ ಇಂಡಿಯಾಸಂಚಾರದಲ್ಲಿ ವಿಳಂಬವಾಗಿದೆ. ಜೊತೆಗೆ ಚೆನ್ನೈ, ಬೆಂಗಳೂರಿಂದ ಬರಬೇಕಿದ್ದ ವಿಮಾನಗಳ ಲ್ಯಾಂಡಿಂಗ್ ಕೂಡ ವಿಳಂಬವಾಗುತ್ತಿದೆ.

ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಭಾರೀ ದುರಂತ 

ಇತ್ತೀಚೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದುಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಭಾರೀ ದುರಂತ ತಪ್ಪಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿತ್ತು

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿಹೊಡೆದಿತ್ತು. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದರು. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ವೇನಿಂದ ವಿಮಾನವನ್ನು ವಾಪಾಸ್ ತರಲಾಗಿತ್ತು.

ಬಲಿಕ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಯಿತು. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಅವಘಡಆತಂಕಕ್ಕೆ ಕಾರಣವಾಗಿತ್ತು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »