TOP STORIES:

ಮಂಗಳೂರು ಏರ್‌ಪೋರ್ಟ್‌ಗೆ ಕೋಟಿ-ಚೆನ್ನಯ ಹೆಸರಿಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌ನಿಂದ ಸ್ಟಿಕ್ಕರ್‌ ಅಭಿಯಾನ


ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಿ ಬಿಲ್ಲವ ಬ್ರಿಗೇಡ್‌‌ 8 ಕ್ಷೇತ್ರಗಳಲ್ಲಿ ಒಂದು ತಿಂಗಳ ಕಾಲ ಸ್ಟಿಕ್ಕರ್ ಅಭಿಯಾನ ನಡೆಸಲಿದೆ.

ಮಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಲವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, “ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ 2020ರ ಡಿ.7ರಂದು ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮಂಗಳೂರು ಅಂತರಾಷ್ಟ್ರೀಯ ನಿಲ್ದಾಣದವರೆಗೆ ಬೃಹತ್‌‌‌‌ ಬೈಕ್‌ ಜಾಥಾವನ್ನು ಹಮ್ಮಿಕೊಂಡಿತ್ತು. ಇದು ನಡೆದ ಮರುದಿನ ಕರ್ನಾಟಕ ವಿಧಾನಸಭೆಯಲ್ಲಿ ಮೂಡುಬಿದಿರೆಯ ಶಾಸಕ ಉಮಾನಾಥ್‌ ಕೋಟ್ಯಾನ್‌ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದರು” ಎಂದು ತಿಳಿಸಿದ್ದಾರೆ.

“ಒಂದು ವರ್ಷ ಕಳೆದರೂ ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಉತ್ತರ ಬಂದಿಲ್ಲ. ಕರ್ನಾಟಕ ರಾಜ್ಯ ಸರ್ಕಾರ ಮುಂದಿನ ತಿಂಗಳಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಮರುನಾಮಕರಣ ಪ್ರಸ್ತಾಪನೆಯನ್ನು ಅಂಗೀಕರಿಸಿ ತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಒತ್ತಾಯಿಸುತ್ತಿದ್ದೇವೆ” ಎಂದಿದ್ದಾರೆ.

“ಮುಂದಿನ ಒಂದು ತಿಂಗಳ ಕಾಲ ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಲು ಸ್ಟಿಕ್ಕರ್‌‌ ಅಭಿಯಾನ ನಡೆಸಲಾಗುವುದು. ಈ ಅಭಿಯಾನ ಮುಗಿದ ಬಳಿಕ ಇದೇ ಬೇಡಿಕೆಯನ್ನು ಮುಂದಿಟ್ಟು ಬೃಹತ್‌‌ ಜನ ಸಮಾವೇಶ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಈ ಸಂದರ್ಭ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಸಾಲ್ಯಾನ್, ಕಿಶನ್ ಅಮೀನ್, ಪ್ರಶಾಂತ್, ಪವನ್ ಸಾಲ್ಯಾನ್ ಉಪಸ್ಥಿತರಿದ್ದರು.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »