ಮಂಗಳೂರು: ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಈ ನಡುವೆ ದ.ಕ ಜಿಲ್ಲಾ ಉತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೂ ಸೋಂಕು ತಗುಲಿರುವುದು ಧೃಡಪಟ್ಟಿದೆ.ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ” ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.
ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಂಗಳೂರು , ಉಡುಪಿ, ಮಣಿಪಾಲ ನಗರದಲ್ಲಿ ಇಂದಿನಿಂದ ಏ.20 ರವರೆಗೆ ರಾತ್ರಿ 10 ರಿಂದ ಬೆಳಗ್ಗೆ ೫ ಗಂಟೆಯವರೆಗೆ ಕೊರೊನಾ ರಾತ್ರಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.