TOP STORIES:

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…


ಮಂಗಳೂರು : . 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು ಯಕ್ಷಗಾನ ರಂಗದ  ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ, ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ  ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ  ಮಗನಾಗಿ ಜನಿಸಿದಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್ ಗಳಿಂದ ಅವರು ಕರಾವಳಿನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವಪ್ರಶಸ್ತಿಯ ಜೊತೆಗೆಸಾಧನೆ ಶಾರದಾರ್ಮತ್ತುತುಳುವ ಮಾಣಿಕ್ಯಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘಸಂಸ್ಥೆಗಳ ವತಿಯಿಂದ 00ಕ್ಕೂ ಹೆಚ್ಚು ಗೌರವ ಸಂದಿವೆ.

ದೈಜಿವಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಾಲ್ಡರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರನೋವಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದೈಜಿವಲ್ಡ್ ಟಿವಿ ಶೋಪ್ರೈವೇಟ್ ಚಾಲೆಂಜ್ಎಂಬ ಹೊಸ ಪ್ರಯೋಗದಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನ ಲಾಕ್ ಡೌನ್  ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯಾದಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

ಅವರ  ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಮೂರು ಕೇಂದ್ರೀಯವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತಿ ವರ್ಷನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ ಜನವರಿ 26-2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ್ಟ ಮಂಗಳೂರು ಇಲ್ಲಿನಡೆಯಲಿದೆ. ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆವರ್ಷದ ವ್ಯಕ್ತಿಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದುಟ್ರಸ್ಟ್ ನ್ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »