TOP STORIES:

‘ಮಂಗಳೂರು ವಿಮಾನ ನಿಲ್ದಾಣ ಇನ್ಮುಂದೆ ಕೋಟಿ ಚೆನ್ನಯ ಏರ್‌‌ಪೋರ್ಟ್’ – ಬೋರ್ಡ್ ಹಾಕಿಸಿದ ಮಿಥುನ್‌ ರೈ


ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು 50 ವರ್ಷಗಳ ಕಾಲ ಅದಾನಿ ಕಂಪನಿಗೆ ಹಸ್ತಾಂತರಗೊಳಿಸಿದ ಬಳಿಕ ವಿಮಾನ ನಿಲ್ದಾಣದ ನಾಮಫಲಕದಲ್ಲಿ ಅದಾನಿ ಏರ್‌‌ಪೋರ್ಟ್ ಎಂದು ಸೇರಿಸಲಾಗಿದೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಮಿಥುನ್‌ ರೈ ಅವರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರು ಇಡಲು ಒತ್ತಾಯ ಮಾಡುತ್ತಲ್ಲೇ ಇದ್ದಾರೆ.

ಈ ನಡುವೆ ಈಗ ಮಿಥುನ್‌ ರೈ ಅವರು ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ನಾಮಕರಣದ ಬೋರ್ಡ್ ಹಾಕಿಸಿದ್ದಾರೆ. ಹಾಗೆಯೇ, ”ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ನೀವು ನಮ್ಮ ಮಾತನ್ನು ಕೇಳುವುದಿಲ್ಲವೇ? ತುಳುವರ ಭಾವನೆಗಳಿಗೆ ನೀವು ಗಮನ ನೀಡುವುದಿಲ್ಲವೇ? ನಮ್ಮ ನಗರದಲ್ಲಿ ಅದಾನಿ ಏರ್‌ಪೋರ್ಟ್ಸ್ ಬೋರ್ಡ್‌ಗಳನ್ನು ಹಾಕಲು ನಾವು ಒಪ್ಪುವುದಿಲ್ಲ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇನ್ಮುಂದೆ ಕೋಟಿ ಚೆನ್ನಯ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್ ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ಇಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ರೂಪದಲ್ಲಿ ಈ ಬೋರ್ಡ್ ಹಾಕಲಾಗಿದೆ. ವಿಮಾನ ನಿಲ್ದಾಣಕ್ಕೆ ತೆರಳುವ ಕೆಂಜಾರು ಸಮೀಪದಲ್ಲಿ ಸುಸ್ವಾಗತ ಕೋಟಿ-ಚೆನ್ನಯ ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಎಂದು ಹಾಕಲಾಗಿದ್ದು ಕೆಳ ಭಾಗದಲ್ಲಿ ಮಿಥುನ್‌ ರೈ ಅವರ ಭಾವಚಿತ್ರವೂ ಇದೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »