TOP STORIES:

ಯುವಕರ ಐಕಾನ್ ಪದ್ಮರಾಜ್ ಬಗ್ಗೆ ಕಾಂಗ್ರೆಸ್ ಒಲವು ವಿಧಾನ ಸಭಾ ಟಿಕೆಟ್ ಗ್ಯಾರಂಟಿ,


ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದೇ ಗೆಲ್ಲಬೇಕು ಎನ್ನುವ  ಚಾಣಕ್ಯ ರಾಜಕೀಯ ಹೆಜ್ಜೆ ಇಡುತ್ತಿರುವಕಾಂಗ್ರೆಸ್,  ಹೈಕಮಾಂಡ್  ಜಾತಿ ಧರ್ಮದ ಭೇದವಿಲ್ಲದೆ ಎಲ್ಲರನ್ನೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವಸರಳ ಸಜ್ಜನಿಕೆಯ ಗುಣ ಹೊಂದಿರುವ ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್ ಬಗ್ಗೆ ವಿಶೇಷ ಒಲವುವ್ಯಕ್ತಪಡಿಸಿದೆ ಎಂದು ತಿಳಿದು ಬಂದಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ನೆಲೆಯಲ್ಲಿ ಸಮಾಜ ಸೇವೆಯಲ್ಲಿ  ಮೈಗೂಡಿಸಿಕೊಂಡು, ಅಪಾರ ಶ್ರದ್ಧೆ, ಭಕ್ತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಬಹು ದೊಡ್ಡ ಜವಾಬ್ದಾರಿಯನ್ನು  ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡು25 ವರ್ಷಗಳಿಂದ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಇವರು ಕ್ಷೇತ್ರದ ಅಭಿವೃದ್ಧಿಯರುವಾರಿ ಜನಾರ್ದನ ಪೂಜಾರಿಯವರ ಅಪ್ಪಟ ಅನುಯಾಯಿಯಾಗಿ ದೇವಸ್ಥಾನಗಳು ಧಾರ್ಮಿಕತೆಯ ಜತೆ ಸಮಾಜಮುಖಿಚಟುವಟಿಕೆಗಳಲ್ಲಿ ಕೂಡ ಮುಂದೆ ಬರಬೇಕೆಂದು ತೋರಿಸಿಕೊಟ್ಟವರು.

1995 ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆಪ್ರಾರಂಭಿಸಿ 4 ವರ್ಷಗಳ ಬಳಿಕ ಸ್ವಂತ ಕಚೇರಿಯನ್ನು ಪ್ರಾರಂಭಿಸಿದರು. ಶುದ್ಧಹಸ್ತದ ರಾಜಕಾರಣಿ ಬಿ.ಜನಾರ್ದನ ಪೂಜಾರಿಯವರಎಲ್ಲ ಚುನಾವಣೆಗಳಲ್ಲಿ ಅವರೊಂದಿಗೆ ದುಡಿದಿರುವ ಇವರು ಜಾತ್ಯತೀತ ಮನೋಭಾವ, ಸರ್ವರಿಗೂ ಸಮಪಾಲು, ಸರ್ವರಿಗೂಸಮಬಾಳು ಎನ್ನುವ ತತ್ವ ಸಿದ್ಧಾಂತದ ಬಗ್ಗೆ ಒಲವು ಹೊಂದಿರುವವರು.

ಕರೊನಾ ಮಹಾಮಾರಿಯ ಸಂದರ್ಭ ಬಡವರ, ನಿರಾಶ್ರಿತರ, ಕೂಲಿಕಾರ್ಮಿಕರ ಸಹಾಯಕ್ಕೆಸ್ವತಃ ಮುಂದೆ ನಿಂತು ಕೆಲಸ ಮಾಡಿದ್ದು, ಗುರುಬೆಳದಿಂಗಳು ಸಂಸ್ಥೆಯ ಮೂಲಕ ಜನಾರ್ದನ ಪೂಜಾರಿಯವರ ಮಾರ್ಗದರ್ಶನ, ದಿ. ಜಯಸುವರ್ಣರ ಆಶೋತ್ತರಗಳಸ್ಫೂರ್ತಿಯ ನೆಲೆಯಲ್ಲಿ ಹಿರಿಯರ ಜತೆ ಕ್ರಿಯಾಶೀಲ ಯುವಕರ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿರುವುದು ಪದ್ಮರಾಜ್ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಿತು.

ಗಣರಾಜ್ಯೋತ್ಸವದ ಪೆರೇಡ್‌ನಲ್ಲಿ ಶ್ರೀ ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸಂದರ್ಭ ಮುಂಚೂಣಿಯಲ್ಲಿ ನಿಂತುಹೋರಾಟ, 10ನೇ ತರಗತಿಯಲ್ಲಿ ಸಮಾಜ ವಿಜ್ಞಾನ ಪಠ್ಯ ಕೈಬಿಟ್ಟದರ ವಿರುದ್ಧ ಮೊದಲು ಖಂಡನೆ ವ್ಯಕ್ತಪಡಿಸಿ ಹೋರಾಟಸಂಘಟಿಸಿದ್ದು, ಸಮಾಜದ ಎಲ್ಲ ವರ್ಗದ ಜನರನ್ನು ಸಮಾನವಾಗಿ ಗೌರವಿಸುತ್ತ ಎಲ್ಲ ವರ್ಗದ ಜನರಿಂದ ಪ್ರೀತಿ ವಿಶ್ವಾಸ ಗಳಿಸಿದ್ದು. ಮೊದಲಾದ ಅಂಶಗಳ ಜತೆ ಪದ್ಮರಾಜ್‌ರವರಿಗೆ ವಿಧಾನಸಭಾ ಟಿಕೆಟ್ ನೀಡಿದರೆ ಅವರ ವರ್ಚಸ್ಸು ಎಲ್ಲಾ ವಿಭಾಗದಜನಸಮುದಾಯ ವನ್ನು ಆಕರ್ಷಿಸುವ ಜತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಹೆಚ್ಚಿನ ಸೀಟ್ ಗೆಲ್ಲಲುಸಹಾಯವಾಗುತ್ತದೆ ಎನ್ನುವ ಹಲವಾರು ಸಮೀಕ್ಷೆ ವರದಿಗಳು ಪದ್ಮರಾಜ್ ಆರ್‌ಗೆ ಸೀಟ್ ಗ್ಯಾರಂಟಿಯಾಗಲು ಪಕ್ಕಾ ಕಾರಣ ಎಂದುತಿಳಿದು ಬಂದಿದೆ. ಇವರಿಗೆ ಟಿಕೆಟ್ ನೀಡಿದರೆ ಕರಾವಳಿಯ ರಾಜಕೀಯದಲ್ಲಿ ಮಹತ್ವದ ತಿರುವು ಕಾಣಲಿದೆ ಎನ್ನುವ ಅಂಶವೂಬಹಿರಂಗವಾಗಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »